HomeGadag Newsಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ: ಸಚಿವ ಎಚ್.ಕೆ. ಪಾಟೀಲ

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ: ಸಚಿವ ಎಚ್.ಕೆ. ಪಾಟೀಲ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಬಿಂಕದಕಟ್ಟಿ ಮೃಗಾಲಯದ ಹತ್ತಿರದಲ್ಲಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನಕ್ಕೆ ಬರುವವರು ಇನ್ನು ಮುಂದೆ ಸಾಹಸಿ ಕ್ರೀಡೆಗಳನ್ನು ಆಡಿ ಮನರಂಜನೆ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಹೇಳಿದರು.

ಸೋಮವಾರದಂದು ಗದಗ ಅರಣ್ಯ ಪ್ರಾದೇಶಿಕ ವಿಭಾಗ ಹಾಗೂ ಗದಗ ಅರಣ್ಯ ಪ್ರಾದೇಶಿಕ ವಲಯ ಸಹಯೋಗದಲ್ಲಿ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಪಿಕಲ್‌ಬಾಲ್ ಮೈದಾನ, ಆರ್ಚರಿ ಕ್ರೀಡಾಂಗಣ, ಚಿಟ್ಟೆ ಪಾರ್ಕ್ ಹಾಗೂ ಸಾಹಸಿ ಚಟುವಟಿಕೆ ಕ್ರೀಡಾಂಗಣಕ್ಕೆ ಸಚಿವ ಎಚ್.ಕೆ. ಪಾಟೀಲ ಚಾಲನೆ ನೀಡಿದರು.

ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನ ಒಂದು ಪ್ರವಾಸಿ ತಾಣವಾಗಿದೆ. ಒಂದು ದಿನದ ಪಿಕ್ನಿಕ್‌ಗಾಗಿ ಸಾಕಷ್ಟು ಶಾಲಾ ಮಕ್ಕಳು ಭೇಟಿ ನೀಡುತ್ತಿದ್ದಾರೆ. ಇನ್ನು ಮುಂದೆ ಸಸ್ಯೋದ್ಯಾನ ವೀಕ್ಷಣೆ ಜೊತೆಗೆ ಪಿಕಲ್‌ಬಾಲ್, ಆರ್ಚರಿ ಕ್ರೀಡಾಂಗಣದಲ್ಲಿ ಬಿಲ್ಲು ಕ್ರೀಡೆ, ಚಿಟ್ಟೆ ಪಾರ್ಕ್‌ನಲ್ಲಿ ಪತಂಗಗಳ ಕಲರವ, ಸಾಹಸ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಸಂಪೂರ್ಣ ಮನರಂಜನೆ ದೊರೆಯುವಂತೆ ಸರ್ಕಾರದಿಂದ ಸೌಲಭ್ಯಗಳನ್ನು ಒದಗಿಸಲಾಗಿದೆ. ಅವುಗಳ ಸದ್ಬಳಕೆಯನ್ನು ಇಲ್ಲಿ ಬರುವ ಮಕ್ಕಳು ಹಾಗೂ ಸಾರ್ವಜನಿಕರು ಪಡೆಯಬಹುದಾಗಿದೆ ಎಂದರು.

ಈಗಾಗಲೇ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಹಲವಾರು ಮನರಂಜನಾ ಚಟುವಟಿಕೆಗಳಿಗೆ ಅವಕಾಶ ಒದಗಿಸಲಾಗಿದೆ. ಜಿಪ್‌ಲೈನ್ ಮೂಲಕ ಸಾಹಸ ಪ್ರಿಯರಿಗೆ ಮುದ ನೀಡುವಂತೆ ಸಸ್ಯೋದ್ಯಾನ ಅಭಿವೃದ್ಧಿಪಡಿಸಲಾಗಿದೆ. ಅರಣ್ಯ ಹುತಾತ್ಮರ ಸ್ಮಾರಕವನ್ನು ಸಹ ಅಂದವಾಗಿ ನಿರ್ಮಿಸಲಾಗಿದೆ. ಇವೆಲ್ಲವುಗಳು ಆಗಮಿಸುವ ಪ್ರವಾಸಿಗರಿಗೆ ಮುದ ನೀಡಲಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕಾಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕೆ, ಬಿಂಕದಕಟ್ಟಿ ಗ್ರಾ.ಪಂ ಅಧ್ಯಕ್ಷ ನಿಂಗಪ್ಪ ಪರಪ್ಪನವರ, ಉಪಾಧ್ಯಕ್ಷ ದ್ಯಾಮವ್ವ ಆರಟ್ಟಿ, ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಹಾಂತೇಶ ಪೊಲೀಸ್‌ಪಾಟೀಲ, ವೀರೇಂದ್ರ ಮರಿಬಸಣ್ಣವರ ಸೇರಿದಂತೆ ಹಿರಿಯರು, ಗಣ್ಯರು ಹಾಜರಿದ್ದರು.

ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದು, ಅವೆಲ್ಲವುಗಳನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಸೆಳೆಯುವ ಪ್ರಯತ್ನ ನಿರಂತರವಾಗಿ ಸಾಗಿದೆ. ಜಿಲ್ಲೆ ಐತಿಹಾಸಿಕವಾಗಿ, ಸಾಹಿತ್ಯಿಕವಾಗಿ, ನೈಸರ್ಗಿಕವಾಗಿ ಸಮೃದ್ಧವಾಗಿದ್ದು ಸಾರ್ವಜನಿಕರು ಹೆಚ್ಚು ಸಂಖ್ಯೆಯಲ್ಲಿ ಭೇಟಿ ನೀಡುವ ಭರವಸೆಯಿದೆ ಎಂದು ಸಚಿವ ಡಾ. ಎಚ್.ಕೆ. ಪಾಟೀಲ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!