ಬೆಳಗಾವಿ: ನಾಯಕತ್ವ ಬದಲಾವಣೆ ಇಲ್ಲ, ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿಎಂ ಪುತ್ರ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಚಳಿಗಾಲದ ಅಧಿವೇಶನದ ಸಂದರ್ಭದಲ್ಲೇ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು,
ಪಕ್ಷದ ಹೈಕಮಾಂಡ್ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಪ್ರಸ್ತುತ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಹೇಳಿದ್ದಾರೆ. ಒಂದೆಡೆ, ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಆದರೆ, ಯತೀಂದ್ರ ಮತ್ತೆ ಮತ್ತೆ ಹೇಳಿಕೆ ನೀಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.



