ನಮ್ಮ ಪಕ್ಷದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಚರ್ಚೆ ಇಲ್ಲ: ಎಂ ಬಿ ಪಾಟೀಲ್‌

0
Spread the love

ಶಿವಮೊಗ್ಗ: ನಮ್ಮ ಪಕ್ಷದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಹಾಗಾಗಿ ಅದರ ಬಗ್ಗೆ ಚರ್ಚೆ ಇಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದ್ದಾರೆ. ಸಿಎಂ ರೇಸ್ ನಲ್ಲಿ ತಮ್ಮ ಹೆಸರು ವಿಚಾರಕ್ಕೆ ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಖರ್ಚಿ ಖಾಲಿ ಇಲ್ಲ.

Advertisement

ಹಾಗಾಗಿ ಅದರ ಬಗ್ಗೆ ಚರ್ಚೆ ಇಲ್ಲ, ಶಿವಮೊಗ್ಗ ಏರ್ಪೋರ್ಟ್ ನೈಟ್ ಲ್ಯಾಂಡಿಂಗ್ ಫೆಸಿಲಿಟಿ ಕುರಿತಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮೊನ್ನೆಯಷ್ಟೇ 165 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆಗೆ ಒಪ್ಪಿಗೆ ನೀಡಲಾಗಿದೆ. ಎಲ್ಲಾ ರೀತಿಯ ಸೌಲಭ್ಯಗಳನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಒದಗಿಸುತ್ತೇವೆ ಎಂದರು.

ಇನ್ನೂ ಸುರ್ಜೆವಾಲಾ ನೋಟಿಸ್ ನೀಡಿದ್ದಾರೆ ಎಂಬ ಮಂಜುನಾಥ ಭಂಡಾರಿ ಅವರ ಹೇಳಿಕೆ ಬಗ್ಗೆ ನನಗೆ ಏನೂ ಗೊತ್ತಿಲ್ಲ. ಕಾರ್ಯಾಧ್ಯಕ್ಷರಾಗಿ ಅವರು ಹೇಳಿರಬಹುದು, ಬೇರೆ ಪಕ್ಷದ ನಾಯಕರೊಂದಿಗೆ ಊಟ ಮಾಡಿದ್ದಾರೆ ಎಂಬ ಮಾತ್ರಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯಲ್ಲ,

ಅದರಲ್ಲಿ ಯಾವುದೇ ತಪ್ಪು ಇರುವುದಿಲ್ಲ. ನಮ್ಮ ಮನೆಗೂ ಅಶೋಕ್ ಸೇರಿದಂತೆ ಬಿಜೆಪಿ ಅನೇಕ ಮುಖಂಡರು ಬಂದು ಹೋಗಿದ್ದಾರೆ. ನಾನು ಸಹ ಮಾಜಿ ಸಿಎಂ ಬೊಮ್ಮಾಯಿ ಮನೆಗೆ ಹೋಗಿದ್ದೇನೆ ಹಾಗೆಂದ ಮಾತ್ರಕ್ಕೆ ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಸರಿಯೇ ಎಂದು ಪ್ರಶ್ನೆ ಮಾಡಿದರು.


Spread the love

LEAVE A REPLY

Please enter your comment!
Please enter your name here