ಬೆಂಗಳೂರು: ಚೀನಾದಲ್ಲಿ ಪತ್ತೆಯಾಗಿರುವ ಹೊಸ ವೈರಸ್ ಪ್ರಪಂಚದಾದ್ಯಂತ ಭಾರೀ ಸದ್ದು ಮಾಡ್ತಿದೆ. ಕೊರೊನಾ ವೈರಸ್ ನಂತರ ಚೀನಾದಲ್ಲಿ ಹೊಸ ವೈರಸ್ ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಇದೀಗ ಈ ವೈರಸ್ ಬೆಂಗಳೂರಿನಲ್ಲೂ ಪತ್ತೆಯಾಗಿದೆ. ಇನ್ನೂ ಈ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೇ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಹೆಚ್ಎಂಪಿ ವೈರಸ್ ಇದು ಹೊಸದೇನಲ್ಲ. ಬಹಳ ವರ್ಷಗಳಿಂದ ಹೆಚ್ಎಂಪಿ ವೈರಸ್ ವಿಶ್ವದಾದ್ಯಂತ ಇದೆ. ಹೆಚ್ಎಂಪಿ ವೈರಸ್ನಿಂದ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿಸಿದ್ದಾರೆ.
ಚೀನಾದಲ್ಲಿ ಮ್ಯೂಟೆಟ್ ಆಗಿದೆಯೋ ಏನೋ ನನಗೆ ಗೊತ್ತಿಲ್ಲ. ಚೀನಾದಲ್ಲಿನ ವೈರಸ್ ಬಗ್ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಬೇಕು. ದೇಶದಲ್ಲಿ ಹೆಚ್ಎಂಪಿ ವೈರಸ್ ರೀತಿ ನೂರಾರು ವೈರಸ್ಗಳಿವೆ. 2001ರಲ್ಲಿ ಪ್ರಥಮ ಬಾರಿಗೆ ಹೆಚ್ಎಂಪಿ ವೈರಸ್ ಪತ್ತೆಹಚ್ಚಲಾಗಿದೆ. 8 ತಿಂಗಳ ಮಗು ನಾರ್ಮಲ್ ಆಗಿದೆ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಮಗು ಡಿಸ್ಚಾರ್ಜ್ ಆಗಲಿದೆ ಎಂದು ಹೇಳಿದ್ದಾರೆ.