ಮೈಸೂರು: ದಲಿತ ಸಿಎಂ ಚರ್ಚೆ ವಿಚಾರವಾಗಿ ಸದ್ಯಕ್ಕೆ ಯಾವುದೇ ಚರ್ಚೆ ಆಗಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ. ಸಚಿವ ಮಹದೇವಪ್ಪ ಮನೆಯಲ್ಲಿ ಡಿನ್ನರ್ಗೆ ಹೋಗಿದ್ದೆವು.
ಅಲ್ಲಿ ಯಾವುದೇ ರಾಜಕೀಯ ಚರ್ಚೆ ಆಗಲಿಲ್ಲ. ನಾವು ಅವಾಗವಾಗ ಡಿನ್ನರ್ಗೆ ಸೇರುತ್ತಿರುತ್ತೇವೆ. ಇದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ. ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಇರುತ್ತಾರೆ. ಸಿಎಂ ಬದಲಾವಣೆ ಪ್ರಶ್ನೆ ಸದ್ಯಕ್ಕೆ ಉದ್ಭವಿಸುವುದಿಲ್ಲ, ದಲಿತ ಸಿಎಂ ಚರ್ಚೆ ವಿಚಾರವಾಗಿ ಸದ್ಯಕ್ಕೆ ಯಾವುದೇ ಚರ್ಚೆ ಆಗಿಲ್ಲ ಎಂದರು.
ಹರಿಯಾಣ ವಿಧಾನಸಭಾ ಚುನಾವಣೆ ಸೋಲಿಗೆ ಬೇರೆ ಬೇರೆ ಕಾರಣಗಳಿವೆ. ಅದನ್ನು ಹೈಕಮಾಂಡ್ ವಿಶ್ಲೇಷಣೆ ಮಾಡುತ್ತದೆ. ಹರಿಯಾಣದಲ್ಲಿ ಪ್ರಧಾನಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುಡಾ ವಿಚಾರವನ್ನು ಭಾಷಣ ಮಾಡಿದ್ದು, ಯಾವುದೇ ಎಫೆಕ್ಟ್ ಆಗಿಲ್ಲ. ಮುಡಾ ಬಗ್ಗೆ ಮೈಸೂರು ಜನರಿಗೆ ಗೊತ್ತಿಲ್ಲ. ಇನ್ನು ಹರಿಯಾಣದ ಜನರಿಗೆ ಏನು ಗೊತ್ತು? ಹರಿಯಾಣ ಸೋಲಿಗೆ ಹೈಕಮಾಂಡ್ ವಿಶ್ಲೇಷಣೆ ಮಾಡುತ್ತದೆ ಎಂದರು.