ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ: ಡಾ. ಜಿ.ಪರಮೇಶ್ವರ್‌

0
Spread the love

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು. ಕಾಂಗ್ರೆಸ್‌ ಪಕ್ಷದ ಸಮಾವೇಶ ಆಗಿರುವುದರಿಂದ ಯಾವುದೇ ಬಣ ಇಲ್ಲ. ಬಿಜೆಪಿಯಲ್ಲಿ ಮೂರು ಬಣ ಮಾಡಿಕೊಂಡಿದ್ದರಲ್ಲ.

Advertisement

ಆ ರೀತಿ ನಮ್ಮ ಪಕ್ಷದಲ್ಲಿ ಬಣ ಇಲ್ಲ. ನಾವೆಲ್ಲ ಒಟ್ಟಿಗಿದ್ದೇವೆ, ಒಟ್ಟಾಗಿ ಆಡಳಿತ ಮಾಡುತ್ತಿದ್ದೇವೆ. ಬಿಜೆಪಿ ಮತ್ತು ಜೆಡಿಎಸ್‌ನವರು ನಮ್ಮನ್ನು ಜನಸಮುದಾಯದಿಂದ ಬೇರ್ಪಡಿಸಲು ಪ್ರಯತ್ನ ಮಾಡಬಹುದು. ಅದು ಸಾಧ್ಯವಾಗುವುದಿಲ್ಲ ಎಂದರು.

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಅನೇಕ ವಿಚಾರಗಳನ್ನು ಪ್ರಸ್ತಾಪ ಮಾಡುತ್ತಾರೆ. ಅದಕ್ಕೆಲ್ಲ‌ ನಾವು ಉತ್ತರ ಕೊಡಬೇಕಿಲ್ಲ. ಅವರು ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿರುತ್ತಾರೆ. ಸಂದರ್ಭ ಬಂದಾಗ ನಾವು ಉತ್ತರ ಕೊಡುತ್ತೇವೆ‌ ಎಂದರು. ಅಧಿಕಾರ ಹಂಚಿಕೆ ಬಗ್ಗೆ ಒಪ್ಪಂದ ಆಗಿರುವ ವಿಚಾರ ನನಗೆ ಗೊತ್ತಿಲ್ಲ.

ಈ ಬಗ್ಗೆ ದೆಹಲಿ ಮತ್ತು ರಾಜ್ಯದಲ್ಲಿ ಇಬ್ಬರು, ಮೂವರನ್ನು ಕೇಳಿದ್ದೇನೆ. ಒಪ್ಪಂದ ಆಗಿದೆ ಅಂತ ಯಾರು ಹೇಳಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಅಂತಹ ಒಪ್ಪಂದ ಆಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಈಗ ಒಪ್ಪಂದ ಆಗಿದೆ ಎನ್ನುವುದಾದರೆ ನಾವೆಲ್ಲ ಯಾಕಿರಬೇಕು ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here