ನವದೆಹಲಿ: ಹಠಾತ್ ಹೃದಯಾಘಾತ ಈಗಾಗಲೇ ಅನೇಕರನ್ನ ಬಲಿ ಪಡೆದಿದೆ. ರಾಜ್ಯದಲ್ಲಿ ಹೆಚ್ಚಾಗ್ತಿರುವ ಹಾರ್ಟ್ ಅರ್ಟಾಕ್ ಕೇಸ್ಗಳಿಗೆ ಕಾರಣ ಏನು ಅನ್ನೋದೇ ದೊಡ್ಡ ಪ್ರಶ್ನೆ ಆಗಿದೆ. ಕೊರೊನಾ ಬಂದ ಬಳಿಕ ಬಿಪಿ, ಶುಗರ್ ಜೊತೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಿದವು.
Advertisement
ಇದಕ್ಕೆಲ್ಲಾ ಕೋವಿಡ್ ಲಸಿಕೆಯೇ ಕಾರಣ ಎಂಬ ಊಹಾಪೋಹದ ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಲೇ ಇದೆ. ಇದರ ನಡುವೆ ರಾಜ್ಯದಲ್ಲಿ ಹೃದಯಾಘಾತಕ್ಕೆ ಅನೇಕರು ಬಲಿಯಾಗಿದ್ದು. ಈ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.
ಈ ಬಗ್ಗೆ ಐಸಿಎಂಆರ್ ಸ್ಪಷ್ಟನೆ ನೀಡಿದ್ದು, ಕೋವಿಡ್ ಲಸಿಕೆಗೂ ಈ ಸಾವಿಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಎದೆ ನೋವು ಅಥವಾ ಉಸಿರಾಟದ ತೊಂದರೆಯಂತಹ ಲಕ್ಷಣಗಳು ಕಂಡುಬಂದರೆ, ಎಲ್ಲರೂ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆ ಮಾಡಿಕೊಳ್ಳಬೇಕು ಮತ್ತು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂದು ತಿಳಿಸಿದೆ.