ಬಾಗಲಕೋಟೆ:- ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಕೊಡಲು ದುಡ್ಡಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
Advertisement
ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಲಾಡ್, ಇಡೀ ಕರ್ನಾಟಕದಲ್ಲೇ ಈಗ ಮಹಿಳೆಯರಿಗೆ ಉಚಿತ ಬಸ್ಸು ಇದೆ. ಕಾರ್ಮಿಕರಿಗೆ ಉಚಿತ ಮಾಡುವುದು ಕಷ್ಟ. ನಮ್ಮ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಕೊಡಲು ದುಡ್ಡಿಲ್ಲ ಎಂದು ತಿಳಿಸಿದರು.
ಇನ್ನೂ ಕಾರ್ಮಿಕ ಇಲಾಖೆಯಲ್ಲಿ ನಡೆದಿರುವ 8 ಕೋಟಿ ಹಣ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆ ಅಂತಿಮ ಹಂತದಲ್ಲಿದ್ದು ಯಾರು ತಪ್ಪೆಸಗಿದ್ದಾರೋ ಅವರ ಮೇಲೆ ಕ್ರಮ ಆಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.