ಕಲಬುರಗಿ: ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
Advertisement
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಷಡ್ಯಂತ್ರ ಮಾಡುವ ಅನಿವಾರ್ಯತೆ ಇಲ್ಲ. ಬಿಜೆಪಿ ರೀತಿ ಕಾಂಗ್ರೆಸ್ ಷಡ್ಯಂತ್ರ ಮಾಡಿದರೆ ಬಿಜೆಪಿಯವರಿಗೆ ಜೈಲುಗಳು ಸಾಕಾಗಲ್ಲ ಎಂದರು.
ಇನ್ನೂ ರಾಜಕಾರಣಿಗಳು ಅಂದ ಮೇಲೆ ನಮ್ಮನ್ನು ಜನ ಅನುಕರಣೆ ಮಾಡುತ್ತಾರೆ. ನಮ್ಮ ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಂಡು ಮಾತನಾಡಬೇಕು. ಹೆಣ್ಣು ಮಕ್ಕಳ ಬಗ್ಗೆ ನಾಲಗೆ ಬಿಗಿ ಹಿಡಿದುಕೊಂಡು ಮಾತನಾಡಬೇಕು ಎಂದು ಅವರು ವಾಗ್ದಾಳಿ ಮಾಡಿದರು.