ಬೆಳಗಾವಿ: ರಾಜು ಕಾಗೆ ಏನೂ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ ಎಂದು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾಗವಾಡ ಮತಕ್ಷೇತ್ರದಲ್ಲಿ ಬಸವೇಶ್ವರ ಏತ ನೀರಾವರಿ ಯೋಜನೆ ನೆನೆಗುದಿಗೆ ಬಿದ್ದಿರುವ ವಿಚಾರವಾಗಿ ಕಾಗವಾಡ ಶಾಸಕ ರಾಜುಕಾಗೆ ಹೇಳಿಕೆ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಅವರು, ರಾಜು ಕಾಗೆ ಏನೂ ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯ ಇಲ್ಲ. ಬಾಗಲಕೋಟೆ ಅಧಿಕಾರಿಗಳ ಜೊತೆಗೆ ಮಾತನಾಡಿದ್ದೇನೆ.
Advertisement
ವಿದ್ಯುತ್ ಸರಬರಾಜು ವಿಚಾರವಾಗಿ ತಾಂತ್ರಿಕ ತೊಂದರೆ ಇತ್ತು. ಅದನ್ನು ಆದಷ್ಟು ಬೇಗ ಸರಿಪಡಿಸಿ ಮೊದಲ ಹಂತದ ಕಾಮಗಾರಿ ಅತಿಶೀಘ್ರದಲ್ಲಿ ಚಾಲನೆ ನೀಡುವ ಕೆಲಸ ಮಾಡುತ್ತೇವೆ ಎಂದರು. ಇನ್ನೂ ಬೆಳಗಾವಿ ಜಿಲ್ಲೆಯ ವಿಭಜನೆ ಕುರಿತು ಮಾತನಾಡಿ, ಗೋಕಾಕ, ಚಿಕ್ಕೋಡಿ, ಅಥಣಿ ಜಿಲ್ಲೆ ಮಾಡುವದರಲ್ಲಿ ಯಾವುದೇ ತಪ್ಪಿಲ್ಲ. ಈ ಭಾಗದ ಜನರ ಆಶಯವನ್ನು ಮುಖ್ಯಮಂತ್ರಿ ಗಳ ಗಮನಕ್ಕೆ ತರುವ ಕೆಲಸ ಮಾಡುತ್ತೇನೆ ಎಂದರು.