ಬೆಂಗಳೂರು: ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ ತಡೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಕಾನೂನು ಹೋರಾಟ ಮಾಡೋದಕ್ಕೆ ಯಾವುದೇ ತಡೆ ಇಲ್ಲ. ಆರೋಪ ಬಂದಾಗ ಸರ್ಕಾರಿ ತನಿಖಾ ಸಂಸ್ಥೆಗಳು ತನಿಖೆ ಮಾಡಿ ಈ ರೀತಿ ಇದೆ ಅಂತ ಹೇಳಬಹುದು. ಡಾಕ್ಯುಮೆಂಟ್ನ ಆಧಾರದ ಮೇಲೆ ಸರ್ಕಾರ ಒಂದು ನಿರ್ಧಾರಕ್ಕೆ ಬರಬಹುದು.
ಲೋಕಾಯುಕ್ತದವರು ಯಾಕೆ ಪ್ರಾಸಿಕ್ಯೂಷನ್ಗೆ ಕೇಳಿದ್ದಾರೆ. ಅವರು ತನಿಖೆ ಮಾಡುವಾಗ ಕಾನೂನು ವಿರುದ್ಧವಾಗಿದ್ದಾರಾ ಅಂತ ಪ್ರಾಸಿಕ್ಯೂಷನ್ಗೆ ಕೇಳಿದ್ದಾರೆ. ಯಾವ ರೀತಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ತಿಳಿಸಿದರು.
ಕುಮಾರಸ್ವಾಮಿ ಹಾಗೂ ನಾಲ್ಕೈದು ಜನರ ಬಗ್ಗೆ ಕೇಳಿದೆ. ಅದನ್ನ ಕಾನೂನು ಬಾಹಿರ ಅಂದ್ರೆ ಹೇಗೆ?. ಯಾವುದಕ್ಕೆ ಮುಖ್ಯಮಂತ್ರಿಯನ್ನು ಸೇಫ್ ಮಾಡಬೇಕು?. ಸಿಎಂ ವೆರಿ ಸೇಫ್, ನಾವು ಮೀಟಿಂಗ್ ಮಾಡಿದ್ರೆ ಸಿಎಂ ಸೇಫ್ ಮಾಡೋಕೆ ಹೊರಟಿದ್ದಾರೆ ಅಂತಾರೆ. ಅದರಲ್ಲಿ ಏನು ತಪ್ಪಿದೆ? ನಾವು ಅವರ ಜೊತೆ ಇದ್ದೇವೆ ಎಂದು ಪರಮೇಶ್ವರ್ ಸ್ಪಷ್ಟಪಡಿಸಿದರು.