Operation Sindoor: ನಮ್ಮ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ: ಆಪರೇಷನ್ ಸಿಂಧೂರ್ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯೆ.!

0
Spread the love

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

Advertisement

ಸಿಎಂ ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಪೋಸ್ಟ್​ ಮಾಡಿ, “ಆಪರೇಷನ್ ಸಿಂಧೂರ್ ಹಿಂದಿನ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಧೈರ್ಯಕ್ಕೆ ನಾನು ಸೆಲ್ಯೂಟ್​ ಮಾಡುತ್ತೇನೆ. ಅವರ ವೀರೋಚಿತ ಕಾರ್ಯಾಚರಣೆ ಭಾರತ ಯಾವುದೇ ರೀತಿಯ ಭಯೋತ್ಪಾದನೆಯನ್ನು ಸಹಿಸುವುದಿಲ್ಲ ಎಂದು ಪುನರುಚ್ಚರಿಸುತ್ತದೆ” ಎಂದಿದ್ದಾರೆ.

“ಪಹಲ್ಗಾಮ್‌ನಲ್ಲಿ ನಡೆದ ಕ್ರೂರ ದಾಳಿ ಕೇವಲ ಮುಗ್ಧ ಜೀವಗಳ ಮೇಲೆ ನಡೆದದ್ದಲ್ಲ, ಅದು ಭಾರತದ ಕನಸುಗಳು ಮತ್ತು ಚೈತನ್ಯದ ಮೇಲಿನ ದಾಳಿಯಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರ ಪ್ರತಿಯೊಂದು ಪ್ರಯತ್ನವೂ ದಾಳಿಯ ಸಂತ್ರಸ್ತರಿಗೆ, ಅವರ ಕುಟುಂಬಗಳಿಗೆ ಮತ್ತು ಶಾಂತಿ ಮತ್ತು ಮಾನವೀಯತೆಯಲ್ಲಿ ನಂಬಿಕೆ ಹೊಂದಿರುವ ಪ್ರತಿಯೊಬ್ಬ ಭಾರತೀಯರಿಗೆ ನ್ಯಾಯ ಒದಗಿಸುವ ಪ್ರತಿಜ್ಞೆಯಾಗಿದೆ” ಎಂದು ಹೇಳಿದ್ದಾರೆ.

“ನಮ್ಮ ಪಡೆಗಳೊಂದಿಗೆ ಅಚಲವಾದ ಒಗ್ಗಟ್ಟನ್ನು ಪ್ರದರ್ಶಿಸಲು ಕರ್ನಾಟಕ ದೇಶದ ಜೊತೆ ನಿಲುತ್ತದೆ. ನಿಮ್ಮ ಶೌರ್ಯ, ತ್ಯಾಗ ಮತ್ತು ನಮ್ಮ ಸಾರ್ವಭೌಮತ್ವವನ್ನು ರಕ್ಷಿಸಲು ನಿಮ್ಮ ಅಚಲ ಬದ್ಧತೆಯ ಬಗ್ಗೆ ನಮಗೆ ಹೆಮ್ಮೆ ಇದೆ. ನಮ್ಮ ನೆಲದಲ್ಲಿ ಭಯೋತ್ಪಾದನೆಗೆ ಜಾಗವಿಲ್ಲ. ಭಾರತವು ಶಕ್ತಿ ಮತ್ತು ಏಕತೆಯಿಂದ ಪ್ರತಿಕ್ರಿಯಿಸುತ್ತದೆ” ಎಂದು ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here