ಬೆಂಗಳೂರು:- ತಂದೆಯವರ ಆರೋಗ್ಯದಲ್ಲಿ ಸಮಸ್ಯೆ ಇಲ್ಲ, ಕಾರ್ಯಕರ್ತರು ಆತಂಕ ಪಡಬೇಡಿ ಎಂದು HD ಕುಮಾರಸ್ವಾಮಿ ಅವರು ದೇವೇಗೌಡರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
Advertisement
ತಂದೆಯವರನ್ನ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದರು. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಯಾರೂ ಆತಂಕಪಡುವ ಅಗತ್ಯ ಇಲ್ಲ. ತಂದೆಯವರಿಗೆ ಆರೋಗ್ಯದ ಸಮಸ್ಯೆ ಇಲ್ಲ. ಕಳೆದ ಮೂರು ದಿನಗಳಿಂದ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ದೇವರ ಮತ್ತು ಜನತೆಯ ಆಶೀರ್ವಾದದಿಂದ ಆರೋಗ್ಯವಾಗಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.
ಸದ್ಯ ಮಣಿಪಾಲ್ ಆಸ್ಪತ್ರೆಗೆ ದೇವೇಗೌಡರನ್ನ ದಾಖಲಿಸಲಾಗಿದ್ದು, ಆರೋಗ್ಯ ಸುಧಾರಣೆ ಆಗುವವರೆಗೂ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ. ಸಂಪೂರ್ಣವಾಗಿ ಆರೋಗ್ಯ ಚೇತರಿಕೆ ಬಳಿಕ ಡಿಸ್ಸಾರ್ಜ್ ಮಾಡಲು ನಿರ್ಧರಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.