ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ರಕ್ಷಣೆಯಿಲ್ಲ : ರವಿ ನರೆಗಲ್

0
There is no protection for students in the state
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ, ಅಂಜಲಿ ಹತ್ಯೆ ನಡೆದಿದೆ. ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ಬಂದ ನಂತರ ಮೀನಾಕ್ಷಿ ಎನ್ನುವ ವಿದ್ಯಾರ್ಥಿನಿಯ ಹತ್ಯೆ ಕೊಡಗಿನಲ್ಲಿ ನಡೆದಿದೆ. ಇಂತಹ ಘಟನೆಗಳಿಂದ ವಿದ್ಯಾರ್ಥಿನಿಯರನ್ನು ಶಾಲೆಗೆ ಕಳುಹಿಸಲು ಪಾಲಕರು ಹಿಂಜರಿಯುತ್ತಿದ್ದಾರೆ. ಧಾರವಾಡದ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿನಿಯ ಬಂಗಾರದ ಸರ ಕಳ್ಳತನವಾಗಿದೆ. ಇದೆಲ್ಲವನ್ನು ಗಮನಿಸಿದರೆ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರಕ್ಷಣೆ ಇಲ್ಲ ಎಂದು ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ರವಿ ನರೆಗಲ್ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮ-ಕಾಶ್ಮೀರ, ಬಿಹಾರ, ಉತ್ತರ ಪ್ರದೇಶದಲ್ಲಿ ಅನೇಕ ಅಪರಾಧ ಪ್ರಕರಣಗಳು ನಡೆಯುತ್ತಿದ್ದವು. ಆದರೆ, ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿಯೂ ಅಂತಹ ಘಟನೆಗಳು ನಡೆಯುತ್ತಿವೆ. ಸರ್ಕಾರ ಕೇವಲ ಗ್ಯಾರಂಟಿ ಯೋಜನೆಗಳಿಗಷ್ಟೇ ಒತ್ತು ನೀಡಿ, ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡುತ್ತಿದೆ. ಇದಕ್ಕೆಲ್ಲ ಮೂಲ ಕಾರಣ ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಗಿದ್ದಾರೆ. ಹಾಗಾಗಿ ಶಿಕ್ಷಣ ಸಚಿವರನ್ನು ಕೂಡಲೇ ಸಂಪುಟದಿಂದ ಕೈ ಬೀಡಬೇಕು. ಗೃಹ ಸಚಿವ ಜಿ. ಪರಮೇಶ್ವರ್ ಅವರು ಕಾನೂನು ಚೌಕಟ್ಟನ್ನು ಮೀರಿ ಮಾತನಾಡುತ್ತಾರೆ. ಇವರನ್ನೂ ಕೂಡ ಸಂಪುಟದಿಂದ ವಜಾಗೋಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಶಿವು ಜೋಗಿನ, ನಗರ ಕಾರ್ಯದರ್ಶಿ ಸೋಮಶೇಖರ ಪಾಟೀಲ ಉಪಸ್ಥಿತರಿದ್ದರು.

ರಾಜ್ಯ ಸರ್ಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಮುಂದಾಗುತ್ತಿಲ್ಲ. ಸಿಎಂ, ಡಿಸಿಎಂಗೆ ಆಡಳಿತ ನಡೆಸಲು ಆಗುತ್ತಿಲ್ಲ. ಸರಣಿ ಕೊಲೆಗಳು ನಡೆಯುತ್ತಿದ್ದರೂ ಅವರಿಗೆ ಅರಿವು ಇಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಭದ್ರತೆ ಇಲ್ಲ. ಶಾಲಾ-ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳು ಪತ್ತೆಯಾಗುತ್ತಿವೆ. ಇದರಿಂದ ವಿದ್ಯಾರ್ಥಿಗಳ ಜೀವನ ಸಂಪೂರ್ಣ ಹಾಳಾಗುತ್ತಾ ಹೋಗುತ್ತದೆ. ಕೂಡಲೇ ಸರ್ಕಾರ ವಿದ್ಯಾರ್ಥಿಗಳಿಗೆ ರಕ್ಷಣೆ ನೀಡುವ ಕೇಲಸ ಮಾಡಬೇಕು ಎಂದು ಹನಮಂತ ಹಳ್ಳೂರ ಆಗ್ರಹಿಸಿದರು.

 


Spread the love

LEAVE A REPLY

Please enter your comment!
Please enter your name here