ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬೆದರಿಕೆಗಳು, ಬೆದರಿಕೆ ತಂತ್ರಗಳು, ಕುತಂತ್ರ ಇದ್ಯಾವುದಕ್ಕೂ ಕೂಡ ಭಯ ಪಡುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಳೆದ ಕೆಲವು ದಿನಗಳಿಂದ ಹೋರಾಟ ಮಾಡುತ್ತ ಬಂದಿದೆ.
Advertisement
ಮುಖ್ಯಮಂತ್ರಿಗಳ ಪರಿಸ್ಥಿತಿ, ಸಚಿವರ ಪರಿಸ್ಥಿತಿ ಸಹಜವಾಗಿಯೇ ನಮಗೆ ಅರ್ಥವಾಗುತ್ತಿದೆ. ಸಿಎಂ ರಾಜೀನಾಮೆ ಕೊಡಬೇಕಾದ ಸಂದರ್ಭ ಬಂದಿದ್ದು, ಅದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಇದಕ್ಕಾಗಿಯೇ ಪಿತೂರಿ ನಡೆದಿದೆ. ಸಂದರ್ಭ ಬಂದಾಗ ಅದಕ್ಕೆ ಸೂಕ್ತ ಉತ್ತರ ಕೊಡಲಿದ್ದೇವೆ ಎಂದಿದ್ದಾರೆ.