ಕುಡಿಯುವ ನೀರು, ಮೇವು ಕೊರತೆಯಿಲ್ಲ

0
meeting
Spread the love

ವಿಜಯಸಾಕ್ಷಿ ಸುದ್ದಿ, ಧಾರವಾಡ : ಪ್ರತೀ ವಾರ ಬರ ಪರಿಸ್ಥಿತಿ ನಿರ್ವಹಣೆ ಕುರಿತು ತಹಸೀಲ್ದಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರವಾಗಿ ಪ್ರಗತಿ ಪರಿಶೀಲನೆ ಮಾಡುತ್ತಿರುವುದರಿಂದ ಎಲ್ಲಾ ಅಧಿಕಾರಿಗಳು ಕ್ರಿಯಾಶೀಲವಾಗಿ ತೊಡಗಿಸಿಕೊಂಡು ತಮ್ಮ ತಾಲೂಕಿನ ಸಮಸ್ಯೆಗಳಿಗೆ ನಿಗದಿತ ಸಮಯದಲ್ಲಿ ಸ್ಪಂದಿಸಿ ಪರಿಹರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ನಿರ್ವಹಣೆ ಉತ್ತಮವಾಗಿದ್ದು, ಅಧಿಕಾರಿಗಳು ಪ್ರತಿದಿನ ಗ್ರಾಮಗಳಿಗೆ ಭೇಟಿ ನೀಡಿ, ಜನರ ಸಮಸ್ಯೆ, ಅಹವಾಲುಗಳಿಗೆ ಸ್ಪಂದಿಸಬೇಕೆಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.

Advertisement

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ, ತಾಲೂಕು ಪಂಚಾಯಿತಿ ಇಓಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಧಾರವಾಡ ಜಿಲ್ಲೆಯ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಮೇವು ಸಂಗ್ರಹಣೆ ಹಾಗೂ ಬೆಳೆಹಾನಿ ಪರಿಹಾರ ಪ್ರಗತಿ ಬಗ್ಗೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಿ ಮಾತನಾಡಿದರು.

ಕುಡಿಯುವ ನೀರಿನ ಕೊರತೆ ಆಗುವ ಸಂಭವವಿರುವ ಗ್ರಾಮಗಳನ್ನು ಹಿಂದೆಯೇ ಗುರುತಿಸಲಾಗಿತ್ತು.

ಅದರಂತೆ ಸಮಸ್ಯಾತ್ಮಕ ಹಳ್ಳಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಯಾವುದೇ ರೀತಿಯಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಕೊರತೆ ಕಂಡುಬಂದಿಲ್ಲ ಎಂದು ಹೇಳಿದರು.

ತಹಸೀಲ್ದಾರರು ಇಓ ಅವರೊಂದಿಗೆ ತಮ್ಮ ತಾಲೂಕಿನ ಪ್ರತಿ ಗ್ರಾಮಗಳಿಗೆ ಭೇಟಿ ನೀಡಬೇಕು. ಭೇಟಿ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರು, ಗ್ರಾಮದ ಪ್ರಮುಖರ ಸಭೆ ಜರುಗಿಸಿ ಕುಡಿಯುವ ನೀರು, ದನ ಕರುಗಳಿಗೆ ಮೇವು ಮತ್ತು ನರೇಗಾ ಕೂಲಿ ಕೆಲಸದ ಬಗ್ಗೆ ಸಲಹೆ ಮಾಹಿತಿ ಪಡೆದುಕೊಳ್ಳಬೇಕು. ಅಗತ್ಯಕ್ಕೆ ಅನುಗುಣವಾಗಿ ನಿಯಮಾನುಸಾರ ಕುಡಿಯುವ ನೀರು ಮತ್ತು ಮೇವು ಪೂರೈಕೆಗೆ ಕ್ರಮವಹಿಸಬೇಕೆಂದು ಸೂಚಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಆರ್.ಎಂ. ಸೋಪ್ಪಾಮಠ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಬಿ.ಎಸ್, ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಮಹಾನಗರ ಪಾಲಿಕೆ ಅಧೀಕ್ಷಕ ಅಭಿಯಂತರ ತಿಮ್ಮಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ. ಕೀರಣಕುಮಾರ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಪಶುಪಾಲನೆ ಮತ್ತು ಪಶವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ. ರವಿ ಸಾಲಿಗೌಡರ ಹಾಗೂ ಎಲ್ಲ ತಾಲೂಕುಗಳ ತಹಸೀಲ್ದಾರರು, ತಾ.ಪಂ ಕಾರ್ಯನಿರ್ವಹಕ ಅಧಿಕಾರಿಗಳು, ನರೇಗಾ ಸಹಾಯಕ ನಿರ್ದೇಶಕರು, ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಸಿದ್ದರು.

ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ಪೂರ್ವದಲ್ಲಿ ಮೇವು ಸಂಗ್ರಹಣೆಯ ಕಾರ್ಯವನ್ನು ಮಾಡಲಾಗಿದ್ದು, ಧಾರವಾಡ ತಾಲೂಕಿನ ಮದನಬಾವಿ ಮತ್ತು ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಮೇವು ಬ್ಯಾಂಕ ತೆರೆಯಲಾಗಿದೆ. ಅವಶ್ಯಕತೆ ಕಂಡುಬAದರೆ ಉಳಿದ ತಾಲೂಕುಗಳಲ್ಲಿ ಮೇವು ಬ್ಯಾಂಕ್ ಅಥವಾ ಗೋಶಾಲೆಯನ್ನು ತೆರೆಯಲು ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ದಿವ್ಯ ಪ್ರಭು ಹೇಳಿದರು.

 


Spread the love

LEAVE A REPLY

Please enter your comment!
Please enter your name here