ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರಲ್ಲಿ ತಪ್ಪಿಲ್ಲ: ಜಗದೀಶ್ ಶೆಟ್ಟರ್

0
Spread the love

ಹುಬ್ಬಳ್ಳಿ : ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದರಲ್ಲಿ ತಪ್ಪಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯವರನ್ನು ಭೇಟಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ,

Advertisement

ಅದು ರಾಜಕಾರಣದ ಭಾಗ ಎಂದರು. ಹಿಂದೆ ತಾನು ರಾಜ್ಯ ಸಚಿವ ಸಂಪುಟದಲ್ಲಿ ಗ್ರಾಮೀಣಾಭಿವೃದ್ಧಿ, ಕಂದಾಯ ಮಂತ್ರಿಯಾಗಿದ್ದಾಗ ದೆಹಲಿಯಲ್ಲಿ ಯುಪಿಎ ಸರ್ಕಾರದ ಮಂತ್ರಿಗಳನ್ನು ಮತ್ತು ಸಿಎಂ ಆಗಿದ್ದಾಗ ಆಗಿನ ಪ್ರಧಾನ ಮಂತ್ರಿ ಮನಮೋಹನ ಸಿಂಗ್ ಅವರನ್ನು ಭೇಟಿಯಾಗಿದ್ದುಂಟು ಎಂದರು.

ಇನ್ನೂ ಎಲ್ಲರೂ ಒಗ್ಗಟ್ಟಾಗಿ ಹೋಗಬೇಕು ಎನ್ನುವುದು ನನ್ನ ಆಶಯ ಆಗಿದ್ದು ಶಾಸಕರಾದ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್‌ಗೆ ನೋಟಿಸ್ ಕೊಟ್ಟಿದ್ದಾರೆ. ಆದಷ್ಟು ಬೇಗ ಕ್ರಮ ಆಗುತ್ತದೆ. ಹೈಕಮಾಂಡ್ ಜಾಣ್ಮೆ ಕ್ರಮಗಳನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳುತ್ತದೆ ಎಂದರು.


Spread the love

LEAVE A REPLY

Please enter your comment!
Please enter your name here