ಕೋಲಾರ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ನೆಪದಲ್ಲಿ 15,000 ಕೋಟಿ ಸುಲಿಗೆ ಮಾಡಿ ಬೆಂಗಳೂರು ಗುಂಡಿಗಳನ್ನು ಮುಚ್ಚಲು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು. ಕೋಲಾರದ ಮುಳಬಾಗಿಲು ಖಾಸಗಿ ಕಾರ್ಯಕ್ರಮಕ್ಕೆ ತೆರಳುವ ಮಾರ್ಗ ಮಧ್ಯ ನಿಖಿಲ್ ಕುಮಾರಸ್ವಾಮಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.
ನಾಳೆ ಜೆಡಿಎಸ್ ಪಕ್ಷ ವತಿಯಿಂದ ದೀಪಾವಳಿ ಬಂಪರ್ ಆಫರ್ ನ್ನು ರಾಜ್ಯದ ಜನತೆ ಮುಂದೆ ಗುರುವಾರ ಬಿಡುಗಡೆ ಮಾಡುತ್ತೇವೆ. ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ . ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ರಾಜ್ಯ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.
30/40 ನಿವೇಶನಕ್ಕೆ 4ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿತ್ತು ಈಗ ಎ ಖಾತಾ ಮೂಲಕ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಹೇಳಿದರು.
ಜೆಡಿಎಸ್ ಬಿಜೆಪಿ ಮೈತ್ರಿ ಗಟ್ಟಿಯಾಗಿ ಮುಂದುವರಿಯುತ್ತೆ
ಸ್ಥಳೀಯ ಚುನಾವಣೆಯಲ್ಲಿ ಮೈತ್ರಿಯಲ್ಲಿ ಯಾವುದೇ ಗೊಂದಲವಿಲ್ಲ. ಮೈತ್ರಿ ಗಟ್ಟಿಯಾಗಿದೆ ಮುಂದುವರೆಯುತ್ತೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು. ಈಗಾಗಲೇ ಸನ್ಮಾನ್ಯ ದೇವೇಗೌಡರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಗೌಡರು ಗಟ್ಟಿಯ ನಿಲುವಿಂದ ಮೈತ್ರಿಗೆ ಒಪ್ಪಿಗೆ ನೀಡಿದ್ದಾರೆ. ಮೈತ್ರಿಯಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ವಾತಾವರಣ ಸೃಷ್ಟಿಯಾಗುವುದಕ್ಕೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ನಮ್ಮ ಮೈತ್ರಿ ಗಟ್ಟಿಯಾಗಿ ಮುಂದುವರೆಯುತ್ತೆ ಇದರಲ್ಲಿ ಯಾವುದೇ ಸಂಶಯ ಬೇಡ ಅಂತ ಹೇಳಿದರು.
ಕುಮಾರಣ್ಣ ಅವರಂಥ ನಾಯಕ ರಾಜ್ಯಕ್ಕೆ ಬೇಕು
ರಾಜ್ಯದಲ್ಲಿ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಕಿಡಿಕಾರಿದ್ರು. ಜೆಡಿಎಸ್, ಬಿಜೆಪಿಗೆ ಅನುದಾನ ನೀಡಿಲ್ಲ, ಈ ಬಗ್ಗೆ ಹೋರಾಟ ಮಾಡ್ತೇವೆ. ಸದನದಲ್ಲಿ ಕುಮಾರಣ್ಣ ಅಂತಹ ನಾಯಕರ ಕೊರತೆ ಕಾಡುತ್ತಿದೆ.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿ ಶೂನ್ಯವಾಗಿದೆ
ರಾಜ್ಯ ಸಚಿವ ಸಂಪುಟ ವಿಚಾರ ಅದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ, ಸಚಿವ ಸಂಪುಟ ಪುನರ್ ರಚನೆಯಿಂದ ರಾಜ್ಯದ ಅಭಿವೃದ್ಧಿ ಆಗಲ್ಲ. ಈಗಿರುವ ಸಚಿವ ಸಂಪುಟದಲ್ಲಿ ಇರುವವರನ್ನು ಕೈಬಿಟ್ಟು ಹೊಸ ಮುಖಗಳಿಗೆ ನೀಡಿದ್ರು ಕೂಡ, ರಾಜ್ಯದಲ್ಲಿ ಅಭಿವೃದ್ದಿ ಶೂನ್ಯ. ಸಂಪೂರ್ಣವಾಗಿ ಕುಂಠಿತವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಆರ್ ಎಸ್ ಎಸ್ ವಿಚಾರ
ದೇಶ ಕಟ್ಟುವ ಕೆಲಸ RSS ಮಾಡಿಕೊಂಡು ಬಂದಿದೆ. ನೂರು ವರ್ಷ ಪೂರೈಸಿರುವ ಸಂಘವಾಗಿದೆ. RSS ನಿಂದ ದೇಶಕ್ಕೆ ಸಮಸ್ಯೆ ಉಂಟಾಗಿಲ್ಲ. ಶಿಸ್ತು ಬದ್ದವಾಗಿ ಸಮಾಜ ಕಟ್ಟುವ ಕೆಲಸ ಮತ್ತು ಚಿಂತನೆ ಮಾಡಿದೆ. ಕಾಂಗ್ರೆಸ್ ನ ಕೆಲ ವ್ಯಕ್ತಿಗಳು ವಿಚಾರವನ್ನು ಡೈರ‍್ಷನ್ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದವರು.



