HomeGadag Newsಪಂಚ ಗ್ಯಾರಂಟಿ ಸೌಲಭ್ಯಕ್ಕೆ ವಿಳಂಬ ಬೇಡ: ಬಿ.ಬಿ. ಅಸೂಟಿ

ಪಂಚ ಗ್ಯಾರಂಟಿ ಸೌಲಭ್ಯಕ್ಕೆ ವಿಳಂಬ ಬೇಡ: ಬಿ.ಬಿ. ಅಸೂಟಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಾವುದೇ ರೀತಿಯ ವಿಳಂಬವಾಗಬಾರದು. ಈ ನಿಟ್ಟಿನಲ್ಲಿ ಸಂಬಂಧಿತ ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪಂಚ ಗ್ಯಾರಂಟಿ ಯೋಜನೆಗಳು ಬಡಜನರನ್ನು ಆರ್ಥಿಕವಾಗಿ ಸಬಲರನ್ನಾಗಿಸುವ ಉದ್ದೇಶ ಹೊಂದಿದ್ದು, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ವಿಶೇಷ ಆಸಕ್ತಿ ವಹಿಸಬೇಕು ಎಂದರು.
ಜಿಲ್ಲೆಯ ಎಲ್ಲಾ ತಾಲೂಕುಗಳ ಬಸ್ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಉದ್ದೇಶದಿಂದ ಪ್ರತಿ ತಾಲೂಕಿನಲ್ಲಿ ಗ್ಯಾರಂಟಿ ಶಿಬಿರ ಹಾಗೂ ಸಮಾವೇಶಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬಿ.ಬಿ. ಅಸೂಟಿ ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸದಸ್ಯ ಅಶೋಕ ಮಂದಾಲಿ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಿಂದ ಯಾವುದೇ ಅರ್ಹ ಫಲಾನುಭವಿ ವಂಚಿತರಾಗಬಾರದು. ಫಲಾನುಭವಿಗಳಿಗೆ ಹಣ ತಲುಪಿರುವ ಕುರಿತು ಸಮೀಕ್ಷೆ ನಡೆಸಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯ ಸೌಲಭ್ಯ ತಲುಪುವಲ್ಲಿ ವಿಳಂಬವಾಗದಂತೆ ಕ್ರಮ ವಹಿಸಬೇಕು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು ಎಂದು ಅವರು ಒತ್ತಾಯಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಕುರಿತು ಅಧಿಕಾರಿಗಳು ನಿಯಮಿತ ಪರಾಮರ್ಶೆ ನಡೆಸಬೇಕು. ಯೋಜನೆಗಳ ಸೌಲಭ್ಯ ನಿಗದಿತ ಅವಧಿಯೊಳಗೆ ಅರ್ಹರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದೀಪಕ್ ಲಮಾಣಿ ಮಾತನಾಡಿ, ಶಕ್ತಿ ಯೋಜನೆಯ ಸೌಲಭ್ಯ ಪಡೆಯುವ ಮಹಿಳೆಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
“ಗ್ಯಾರಂಟಿ ಯೋಜನೆಗಳು ಕಾಗದದಲ್ಲಲ್ಲ, ಜನರ ಬದುಕಿನಲ್ಲಿ ಕಾಣಿಸಬೇಕು.”
— ಬಿ.ಬಿ. ಅಸೂಟಿ

ಗೃಹಲಕ್ಷ್ಮಿ ಯೋಜನೆ
ಫೆಬ್ರವರಿ 2026ರವರೆಗೆ 2,61,860 ಅರ್ಜಿಗಳು ನೋಂದಣಿಯಾಗಿದ್ದು, ಅವುಗಳಲ್ಲಿ 2,52,843 ಅರ್ಜಿಗಳಿಗೆ ಮಂಜೂರಾತಿ ದೊರೆತಿದೆ.

ಶಕ್ತಿ ಯೋಜನೆ
1-6-2023ರಿಂದ 3-5-2026ರವರೆಗೆ ಜಿಲ್ಲೆಯಲ್ಲಿ 15,57,32,562 ಮಹಿಳಾ ಪ್ರಯಾಣಿಕರು ಉಚಿತ ಪ್ರಯಾಣ ಸೌಲಭ್ಯ ಬಳಸಿದ್ದು, ₹528.54 ಕೋಟಿ ಆದಾಯ ದಾಖಲಾಗಿದೆ.

ಅನ್ನಭಾಗ್ಯ ಯೋಜನೆ
ಫೆಬ್ರವರಿ 2025ರಿಂದ ಏಪ್ರಿಲ್ 2026ರವರೆಗೆ 5.81 ಲಕ್ಷ ಕ್ವಿಂಟಲ್ ಹೆಚ್ಚುವರಿ ಅಕ್ಕಿ ವಿತರಣೆ ಮಾಡಲಾಗಿದೆ.

ಯುವನಿಧಿ ಯೋಜನೆ
ಜನವರಿ 2024ರಿಂದ ಮೇ 2026ರವರೆಗೆ 8,075 ಅರ್ಜಿಗಳು ಸ್ವೀಕೃತವಾಗಿದ್ದು, 6,712 ಫಲಾನುಭವಿಗಳಿಗೆ ₹19.72 ಕೋಟಿ ಡಿಬಿಟಿ ಮೂಲಕ ವರ್ಗಾವಣೆ ಮಾಡಲಾಗಿದೆ.

ಗೃಹ ಜ್ಯೋತಿ ಯೋಜನೆ
ಏಪ್ರಿಲ್ 2026ರವರೆಗೆ 2,74,543 ಸ್ಥಾವರಗಳು ನೋಂದಣಿಯಾಗಿದ್ದು, ಶೇ. 98.51 ಪ್ರಗತಿ ಸಾಧಿಸಲಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!