ಹಾವೇರಿ: ರಾಜ್ಯ ರಾಜಕಾರಣದಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ರಾಜಕಾರಣದಲ್ಲಿ ಎಲ್ಲ ಹಂತದಲ್ಲೂ ಬದಲಾವಣೆ ಆಗಲಿದೆ. ರಾಜ್ಯ ಚುಕ್ಕಾಣಿ ಬದಲಾವಣೆಯಾದರೂ ಆಶ್ಚರ್ಯ ಪಡಬೇಕಿಲ್ಲ. ರಾಜ್ಯ ರಾಜಕಾರಣದಲ್ಲಿ ಪರಿವರ್ತನೆ ಕಾಲ, ಎಲ್ಲ ಬದಲಾಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಚುಕ್ಕಾಣಿ ಬದಲಾವಣೆ ಆಗಲಿದೆ.
Advertisement
ಆಪರೇಷನ್ ಕಮಲ ಮಾಡುವ ಅವಶ್ಯಕತೆ ನಮಗೆ ಇಲ್ಲ. ಆದರೆ ದೊಡ್ಡ ಪ್ರಮಾಣದ ರಾಜಕೀಯ ಬದಲಾವಣೆ ಆಗಲಿದೆ ಎಂದು ಹೇಳಿದ್ದಾರೆ.
ನಮ್ಮವರೇ ನಮಗೆ ಶತ್ರುಗಳ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ನಾವು ಹಿಂದೆಯೇ ಹೇಳಿದ್ವಿ, ಸಿಎಂಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಅಂತಾ ದೋಣಿಯಲ್ಲಿ ಕುಳಿತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.