ದಿನಕ್ಕೆ ಒಂದೆರಡು ಬೇವಿನ ಎಲೆ ತಿಂದ್ರೆ ಸಿಗುತ್ತೆ ಈ ಅದ್ಬುತ ಆರೋಗ್ಯ ಪ್ರಯೋಜನಗಳು!

0
Spread the love

ಬೇವಿನ ಔಷಧೀಯ ಗುಣಗಳ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? ಇದರ ಬೀಜಗಳಿಂದ ಹಿಡಿದು, ಎಲೆಗಳು, ಬೇರು, ತೊಗಟೆ ಈ ಎಲ್ಲವೂ ನಮ್ಮ ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಬೇವು ರುಚಿಯಲ್ಲಿ ಕಹಿಯಾಗಿದ್ದರೂ ಸಹ, ಅದು ನಮ್ಮ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ.

Advertisement

ರಕ್ತದಲ್ಲಿನ ಸಕ್ಕರೆ ಮಟ್ಟದ ನಿಯಂತ್ರಣ:

ಕಳಪೆ ಮಟ್ಟದ ಜೀವನಶೈಲಿಯ ಕಾರಣದಿಂದಾಗಿ ಭಾರತದಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತಿದೆ. ಹಲವು ಜನರು ಈ ಸಮಸ್ಯೆಗೆ ನಿರಂತರವಾಗಿ ಔಷಧಿಗಳನ್ನು ಸೇವನೆ ಮಾಡುತ್ತಾರೆ. ಇದರ ಹೊರತಾಗಿ ಮನೆಮದ್ದುಗಳ ಸಹಾಯದಿಂದಲೂ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಬಹುದು.. ಈ ಮನೆಮದ್ದುಗಳಲ್ಲಿ ಒಂದು ಬೇವು. ಬೇವಿನ ಸೊಪ್ಪನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿರಿಸಬಹುದು.

ರಕ್ತವನ್ನು ಶುದ್ಧೀಕರಿಸಲು ಸಹಕಾರಿ:

ಬೇವು ಎಷ್ಟು ಔಷಧೀಯ ಗುಣಗಳನ್ನು ಹೊಂದಿದೆ ಎಂದರೆ ಅದು ರಕ್ತವನ್ನು ಸಂಪೂರ್ಣವಾಗಿ ಶುದ್ಧೀಕರಿಸುತ್ತದೆ. ಇದು ರಕ್ತದಿಂದ ವಿಷವನ್ನು ತೆಗೆದುಹಾಕುವ ಮೂಲಕ ರಕ್ತವನ್ನು ನಿರ್ವಿಷಗೊಳಿಸುತ್ತದೆ.

ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ:

ಬೇವು  ಚರ್ಮಕ್ಕೆ ಮಾತ್ರವಲ್ಲದೆ ಉದರಕ್ಕೂ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಔಷಧೀಯ ಗುಣಲಕ್ಷಣಗಳು ಅಸಿಡಿಟಿಯನ್ನು ನಿವಾರಿಸಲು ಸಹಕಾರಿಯಾಗಿದೆ. ಬೇವಿನ ಎಲೆಗಳನ್ನು ನೀರಿನಲ್ಲಿ ಕುದಿಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಎಲ್ಲಾ ಆಮ್ಲೀಯತೆ ಮತ್ತು ಹೊಟ್ಟೆ ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ.

ಬೇವು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರಿಂದಾಗಿ ಹೊಟ್ಟೆ ಹುಣ್ಣು, ಸುಡುವ ಸಂವೇದನೆ, ಗ್ಯಾಸ್ ಇತ್ಯಾದಿ ಸಮಸ್ಯೆಗಳು ನಿವಾರಣೆಯಾಗುತ್ತದೆ. ಅಲ್ಲದೆ ಇದು ಮಲಬದ್ಧತೆ ಸಮಸ್ಯೆಯಿಂದಲೂ ಪರಿಹಾರವನ್ನು ಒದಗಿಸುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಪ್ರಯೋಜನಕಾರಿ:

ಬೇವಿನ ಎಲೆಗಳು ಅನೇಕ ವಿಧದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ, ಇದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲ ನೆಗಡಿ, ಕೆಮ್ಮು ಮುಂತಾದ ಕಾಯಿಲೆಗಳನ್ನು ಗುಣಪಡಿಸಲು ಇದನ್ನು ಬಳಸಲಾಗುತ್ತದೆ.

ಕ್ಯಾನ್ಸರ್ ರೋಗ ಬಾರದಂತೆ ತಡೆಗಟ್ಟುತ್ತದೆ:

ಬೇವಿನ ಎಲೆಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದು ಒಳ್ಳೆಯದು. ಏಕೆಂದರೆ ಇದು ಕ್ಯಾನ್ಸರ್ ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ. ಹಾಗೂ ಬೇವು ದೇಹದಿಂದ ಫ್ರೀ ರಾಡಿಕಲ್ ಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ.

 


Spread the love

LEAVE A REPLY

Please enter your comment!
Please enter your name here