ಬೆಂಗಳೂರಿನ ಈ ರಸ್ತೆಗಳು ನಾಳೆ ಬಂದ್: ವಾಹನ ಸವಾರರೇ ನಿಮ್ಮ ಬದಲಿ ಮಾರ್ಗ ಇಲ್ಲಿದೆ!

0
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ನಾಳೆ ಸಂಚಾರ ನಿರ್ಬಂಧ ಮಾಡಿ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಹಾಗಿದ್ದರೆ ಯಾವ ದಿನಾಂಕಗಳಂದು ಯಾವ ರಸ್ತೆಗಳಲ್ಲಿ ಸಂಚಾರ ನಿರ್ಬಂಧವಿದೆ? ಪರ್ಯಾಯ ರಸ್ತೆಗಳು ಯಾವುವು? ಈ ಕುರಿತು ಇಲ್ಲಿದೆ ವಿವರ.

Advertisement

ನಾಳೆ ಶಿವಾಜಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಗ್ಯ ಮಾತೆಯ ಧ್ವಜಾರೋಹಣ ಕಾರ್ಯಕ್ರಮದ ಪ್ರಯುಕ್ತ ಸಾವಿರಾರು ಭಕ್ತರು ಸೇರುವ ನಿರೀಕ್ಷೆಯಿದೆ. ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಬದಲಿ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

ಸಂಚಾರ ನಿರ್ಬಂಧಿಸಿರುವ ರಸ್ತೆಗಳು:

1. ಜ್ಯೋತಿಕೆಫೆ ವೃತ್ತದಿಂದ ರಸಲ್ ಮಾರ್ಕೆಟ್ ವರೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

2. ಬ್ರಾಡ್‌ವೇ ರಸ್ತೆಯಲ್ಲಿ ರಸಲ್ ಮಾರ್ಕೆಟ್ ಕಡೆಗೆ ರಸ್ತೆಯ ಎರಡು ಬದಿಯಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

3. ಧರ್ಮರಾಜ ಕೋಯಿಲ್ ಸ್ಟ್ರೀಟ್ ಓ.ಪಿ.ಹೆಚ್.ರಸ್ತೆ ವರೆಗೆ ರಸಲ್ ಮಾರ್ಕೆಟ್ ಕಡೆಗೆ ಬರುವ ವಾಹನ ಸಂಚಾರವನ್ನು ತಾಜ್ ವೃತ್ತದಲ್ಲಿ ನಿರ್ಬಂಧಿಸಲಾಗಿರುತ್ತದೆ.

4. ಬಿ.ಆರ್.ವಿ ಜಂಕ್ಷನ್ ನಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.

5. ಬಾಳೇ ಕುಂದ್ರಿ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣಕ್ಕೆ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಸೇರಿದಂತೆ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿರುತ್ತದೆ.

ನಿರ್ಬಂಧಿಸಿರುವ ಸಂಚಾರಕ್ಕೆ ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ.

1. ಅನಿಲ್ ಕುಂಬ್ಳೆ ಜಂಕ್ಷನ್ ಕಡೆಯಿಂದ ಬರುವ ಬಿ.ಎಂ.ಟಿ.ಸಿ ಬಸ್‌ಗಳು ಬಿ.ಆರ್.ವಿ ಜಂಕ್ಷನ್‌ನಲ್ಲಿ ಎಡತಿರುವು ಪಡೆದು- ಸಿ.ಟಿ.ಓ- ಕ್ಲೀನ್ಸ್ ಸರ್ಕಲ್- ಎಂ.ಜಿ ರಸ್ತೆ ಮೂಲಕ ಸಂಚರಿಸಬಹುದಾಗಿರುತ್ತದೆ.

2. ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ ಸೆಂಟ್ರಲ್ ಸ್ಟ್ರೀಟ್ ಬಲ ತಿರುವು ಸಫೀನಾ ಪ್ಲಾಜಾ ಕಮರ್ಷಿಯಲ್ ಸ್ಟ್ರೀಟ್-ಕಾಮರಾಜ ರಸ್ತೆ ಮೂಲಕ ಸಂಚರಿಸಬಹುದಾಗಿದೆ.

3. ದ್ವಿ ಚಕ್ರ ಹಾಗೂ ಲಘು ಮೋಟಾರ್ ವಾಹನಗಳು ಬಿ.ಆರ್.ವಿ-ಸೆಂಟ್ರಲ್ ಸ್ಟ್ರೀಟ್ – ಸೆಲೆಕ್ಟ್ ಜಂಕ್ಷನ್ ಎಡ ತಿರುವು – ರಮಡಾ ಹೋಟೆಲ್-ವಿ.ಎಸ್.ಎನ್ ರಸ್ತೆ ಮೂಲಕ ಸಂಚರಿಸಬಹುದಾಗಿದೆ.


Spread the love

LEAVE A REPLY

Please enter your comment!
Please enter your name here