ಶಿವಮೊಗ್ಗ: ಬಿಹಾರದ ಚುನಾವಣೆಗೋಸ್ಕರ ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಸಂಸದ ಬಿ. ವೈ. ರಾಘವೇಂದ್ರ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ವರ್ಗಾವಣೆ ದಂಧೆ ಮುಗಿದಿದೆ. ಈಗ ರಿನಿವಲ್ ಅಂತ ಎಲ್ಲಾ ಇಲಾಖೆಯ ಮಂತ್ರಿಗಳು ವಸೂಲಿ ಮಾಡಿ ಬಿಹಾರ್ ಚುನಾವಣೆಗೆ ಹಣ ಸಂಗ್ರಹ ಮಾಡುತ್ತಿದ್ದಾರೆ.
ಈಗ ದಂಧೆ ಆಗಿದೆ. ಅದು ಬಿಹಾರಕ್ಕೆ ತಲುಪಲ್ಲ, ಅದು ಎಲ್ಲಿ ತಲುಪಬೇಕೋ ಅಲ್ಲಿಗೆ ತಲುಪುತ್ತದೆ. ಬಿಹಾರದ ಚುನಾವಣೆ ಇಟ್ಟುಕೊಂಡು ರಾಜ್ಯದಲ್ಲಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೂ 6 ತಿಂಗಳು ಸಂಬಳ ಕೊಟ್ಟಿಲ್ಲ ಅಂತ ನೀರುಗಂಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸರ್ವೆಗೆ ಹೋಗಿದ್ದ ಹೆಣ್ಣು ಮಗಳು ಬಾವಿಗೆ ಹಾರಿದ್ದಾರೆ, ಅದೆನು ಅಂತ ನಮಗೆ ಗೊತ್ತಿಲ್ಲ. ಶಿವಮೊಗ್ಗದ ಎಸ್ಟಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ. ಪೊಲೀಸ್ ಅಧಿಕಾರಿಗಳಿಗೆ ಪ್ರಾಮಾಣಿಕತೆಯಿಂದ ಕೆಲಸ ಮಾಡುವ ನೈತಿಕತೆಯನ್ನು ಸರ್ಕಾರ ಕೊಡುತ್ತಿಲ್ಲ ಎಂದಿದ್ದಾರೆ.