ಅವರಿಬ್ಬರು ವಿಧಾನಸೌಧದಲ್ಲಿ ಯಾರನ್ನೂ ರೇಪ್ ಮಾಡಿರಲಿಲ್ಲ ಅಲ್ವಾ? ಬಿಜೆಪಿ ಶಾಸಕರ ಉಚ್ಛಾಟನೆಗೆ ಡಿಕೆಶಿ ಪ್ರತಿಕ್ರಿಯೆ

0
Spread the love

ಬೆಂಗಳೂರು: ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶಾಸಕರಾದ ಎಸ್.ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ನೀಡಿದೆ.

Advertisement

ಇನ್ನೂ ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಅವರೇನು ಯಾರಿಗೂ ಹೆಚ್​​ಐವಿ ಇಂಜೆಕ್ಷನ್ ಚುಚ್ಚಿರಲಿಲ್ಲ ಅಲ್ವಾ? ಮುತ್ತು ರತ್ನಗಳನ್ನು ಪಕ್ಷದಲ್ಲಿ ಇಟ್ಟುಕೊಳ್ಳಲಿ ಎಂದು ಹೇಳಿದ್ದಾರೆ.

ಉಚ್ಚಾಟಿತರಾದ ಎಸ್​ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್​ ಪರ ಮಾತಾಡುವ ಮೂಲಕ ಡಿಸಿಎಂ ಡಿಕೆ ಶಿವಕುಮಾರ್, ಅತ್ಯಾಚಾರದ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನಗೆ ಕುಟುಕಿದ್ದಾರೆ. ಬಿಜೆಪಿಗೆ ಈ ಮೂಲಕ ಟಾಂಗ್ ಕೊಟ್ಟಿದ್ದಾರೆ.


Spread the love

LEAVE A REPLY

Please enter your comment!
Please enter your name here