ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಯನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ. ಶಾಂತ್ ಕುಮಾರ್ ಅಲಿಯಾಸ್ ಶಾಂತ ಬಂಧಿತ ಆರೋಪಿಯಾಗಿದ್ದು,
Advertisement
ಶಾಂತ್ ಕುಮಾರ್ ಸ್ನೇಹಿತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬೀಗ ಹಾಕಿದ್ದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು ಕೆ.ಜಿ.ಎಫ್ ನಿಂದ ಟ್ರೈನ್ ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದರು.
ಇನ್ನೂ ಆರೋಪಿಗಳ ಮೇಲೆ ಬೇರೆ ಬೇರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಕ್ಕು ಹೆಚ್ಚು ಕೇಸ್ ಇರೋದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಈ ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.