ದಾವಣಗೆರೆ:- ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದಲ್ಲಿ ಐವರು ಮುಸುಕುಧಾರಿಗಳು ವೃದ್ಧ ದಂಪತಿಯ ಕೈಕಾಲು ಕಟ್ಟಿ 8.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ ಘಟನೆ ಜರುಗಿದೆ.
Advertisement
60 ವರ್ಷದ ಸಾವಿತ್ರಮ್ಮ, 62 ವರ್ಷದ ಮಾದಪ್ಪ ಎಂಬುವರ ಮೇಲೆ ದರೋಡೆಕೋರರು ಹಲ್ಲೆ ನಡೆಸಿದ್ದಾರೆ. ಬಳಿಕ ಅವರ ಕೈಕಾಲು ಕಟ್ಟಿ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಬಳಿಕ ಅಲ್ಲಿಂದ ಕಳ್ಳರು ಪರಾರಿಯಾಗಿದ್ದಾರೆ. ಸ್ಥಳದಲ್ಲಿ ಸಂತೆಬೆನ್ನೂರು ಠಾಣೆಯ ಪೊಲೀಸರು ಹಾಗೂ ಶ್ವಾನದಳದಿಂದ ಪರಿಶೀಲನೆ ನಡೆದಿದೆ.