HomeKarnataka Newsಕಳ್ಳರ ಕೈಚಳಕ: ಶಾಸಕ ಪ್ರಕಾಶ್‌ ಕೋಳಿವಾಡ ಆಪ್ತಸಹಾಯಕನ ಮನೆಗೆ ಕನ್ನ!

ಕಳ್ಳರ ಕೈಚಳಕ: ಶಾಸಕ ಪ್ರಕಾಶ್‌ ಕೋಳಿವಾಡ ಆಪ್ತಸಹಾಯಕನ ಮನೆಗೆ ಕನ್ನ!

For Dai;y Updates Join Our whatsapp Group

Spread the love

ಹಾವೇರಿ:– ಶಾಸಕ ಪ್ರಕಾಶ್‌ ಕೋಳಿವಾಡ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ.

ಜಿಲ್ಲೆಯ ರಾಣೇಬೆನ್ನೂರು ನಗರದ ಕಂಠಿಬಿರೇಶ್ವರ ನಗರದಲ್ಲಿರುವ ಶಾಸಕ ಪ್ರಕಾಶ್‌ ಕೋಳಿವಾಡ ಅವರ ಆಪ್ತಸಹಾಯಕನ ಮನೆಗೆ ಕಳ್ಳರು ಕನ್ನ ಹಾಕಿದ್ದು, 21 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ದೋಚಿ ಖದೀಮರು ಪರಾರಿಯಾಗಿದ್ದಾರೆ. ಶ್ರೀನಿವಾಸ ಹಳ್ಳಳಿ ಅವರ ಮನೆಯ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಟ್ರಿಜೋರಿಯಲ್ಲಿಟ್ಟಿದ್ದ ಮಾಂಗಲ್ಯಸರ ಮತ್ತು ಕಿವಿ ಒಲೆ ಸೇರಿದಂತೆ ನಾಲ್ಕುವರೆ ಲಕ್ಷ ರೂ. ನಗದನ್ನು ದೋಚಿದ್ದಾರೆ.

ಶ್ರೀನಿವಾಸ ಅವರು ಬೆಂಗಳೂರಿಗೆ ತೆರಳಿದ್ದ ವೇಳೆ ಕಳ್ಳರು ಕೈಚಳಕ ತೋರಿಸಿದ್ದಾರೆ. ಘಟನಾ ಸ್ಥಳಕ್ಕೆ ರಾಣೇಬೆನ್ನೂರು ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!