ನವದೆಹಲಿ: ಬಜೆಟ್ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಶುರು ಮಾಡಿದ್ದಾರೆ. ಈ ವೇಳೆ ಈ ಬಜೆಟ್ ದೇಶದ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು, ಒಟ್ಟಾರೆ ಅಭಿವೃದ್ಧಿಯನ್ನು ಸಾಧಿಸಲು, ಖಾಸಗಿ ವಲಯದಲ್ಲಿ ಹೂಡಿಕೆಯನ್ನು ಹೆಚ್ಚಿಸಲು,
Advertisement
ದೇಶೀಯ ಸೂಕ್ಷ್ಮತೆಗಳನ್ನು ಬಲಪಡಿಸಲು ಮತ್ತು ಮಧ್ಯಮ ವರ್ಗದ ವೆಚ್ಚದ ಶಕ್ತಿಯನ್ನು ಹೆಚ್ಚಿಸುವ ಪ್ರಯತ್ನಗಳ ಭಾಗವಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಇನ್ನೂ ಈ ಬಜೆಟ್ನಲ್ಲಿ ಬಡವರು, ಯುವಕರು, ರೈತರು, ಮಹಿಳೆಯರ ಅಭಿವೃದ್ಧಿ ಸೇರಿದಂತೆ ಒಟ್ಟು ಪ್ರಮುಖ 10 ಕ್ಷೇತ್ರಗಳ ಅಭಿವೃದ್ಧಿ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.