ಕೊಪ್ಪಳ: ಶ್ರೀ ಮಂಜುನಾಥನ ಶಾಪದಿಂದ ಈ ಸರ್ಕಾರ ಸರ್ವನಾಶವಾಗುತ್ತೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಧರ್ಮಸ್ಥಳ ವಿವಾದ ಎಸ್ ಐಟಿ ತನಿಖೆಗೆ ನೀಡಿರೋ ವಿಚಾರಕ್ಕೆ ಗಂಗಾವತಿಯಲ್ಲಿ ಮಾತನಾಡಿದ ಅವರು, ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನ ಅನುಸರಿಸುತ್ತಿದೆ. ಆದ್ದರಿಂದ ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶವಾಗಲಿದೆ ಎಂದು ಹೇಳಿದ್ದಾರೆ.
Advertisement
ಇನ್ನೂ ಈ ವಿಷಯವನ್ನ ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂತ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಸಮುದಾಯವನ್ನ ಒಲೈಸುವ ಸಲುವಾಗಿ ವಿಶ್ವದೆಲ್ಲೆಡೆ ಹೆಸರುವಾಸಿಯಾದ ಮಂಜುನಾಥನ ಸನ್ನಿದಿಗೆ ಕೆಟ್ಟ ಹೆಸರು ಬರುವ ರೀತಿಯಲ್ಲಿ ನಡೆಕೊಳ್ಳುತ್ತಿದ್ದಾರೆ. ಇದನ್ನ ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದರು.