ಮದ್ದೂರು: ಹಿಂದೂ ವಿರೋಧಿ ನೀತಿ ಅನುಸರಿಸಿದರೆ ಈ ಸರ್ಕಾರ 5 ವರ್ಷ ಇರೋದಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಮದ್ದೂರಿನಲ್ಲಿ ಮಾತನಾಡಿದ ಅವರು,
ನಿನ್ನೆ ಮದ್ದೂರಿನಲ್ಲಿ ನನ್ನ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ಈಗಾಗಲೇ 70 ಕೇಸ್ಗಳಿವೆ. ಇದಕ್ಕೆಲ್ಲಾ ಹೆದರುವುದಿಲ್ಲ. ಎಷ್ಟು ಕೇಸ್ ಬೇಕಾದರೂ ಹಾಕಿಕೊಳ್ಳಲಿ ಎಂದು ಹೇಳಿದ್ದಾರೆ. ಇನ್ನೂ ರಾಜ್ಯ ಸರ್ಕಾರಕ್ಕೆ ನಾವು ಒಂದು ಸಂದೇಶ ಕೊಡುತ್ತೇವೆ. ಹಿಂದೂ ವಿರೋಧಿ ನೀತಿ ಅನುಸರಿಸಿದರೆ ಈ ಸರ್ಕಾರ 5 ವರ್ಷ ಇರುವುದಿಲ್ಲ.
ನೇಪಾಳದಲ್ಲಿ ಆದ ರೀತಿಯಲ್ಲೇ ಆಗುತ್ತದೆ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಿಂದ ಕೂಡಿದೆ. ಅದರಲ್ಲೂ ರಾಜ್ಯದ ಅಭಿವೃದ್ಧಿಯನ್ನೂ ನಾಯಕರು ಕೂಡ ಅಡ್ಜೆಸ್ಟ್ಮೆಂಟ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಟೀಕಿಸಿದಾರೆ.



