ಬೆಂಗಳೂರು: ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ ಎಂದು ವಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್ ಬಹಳ ಚಿಂತೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ.
ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದರು.