ಮುಡಾ ಹಗರಣ: ತನಿಖೆ ಮುಗಿದು ವರದಿ ಬರೋ ತನಕ ಈ ನಿವೇಶನ ನಮ್ಮದಲ್ಲ; ಯತೀಂದ್ರ!

0
Spread the love

ಮೈಸೂರು:- ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಗಿದು ವರದಿ ಬರೋ ತನಕ ಈ ನಿವೇಶನ ನಮ್ಮದಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ಮುಡಾ ನಿವೇಶನ ಹಂಚಿಕೆ ಸಂಬಂಧ ನ್ಯಾಯಾಂಗ ತನಿಖೆ ಆಗುತ್ತಿದೆ. ಈಗಾಗಲೇ ಮುಡಾ ಸೈಟ್​​ ವಾಪಸ್ ಕೊಡುವ ಬಗ್ಗೆ ಹೇಳಾಗಿದೆ. 2005 ರಿಂದ ಯಾರಿಗೆಲ್ಲಾ ನಿವೇಶನ ಕೊಟ್ಟಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಅದರ ಅರ್ಥ ನಮಗೆ ಕೊಟ್ಟಿರುವ ನಿವೇಶನವೂ ರದ್ದಾಗಿದೆ ಎಂಬುದು. ಈಗ ಆ ನಿವೇಶನಗಳು ನಮ್ಮ ಸುಪರ್ದಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.

ನ್ಯಾಯಾಂಗ ತನಿಖೆ ನಡೆದು ವರದಿ ಬರುವವರೆಗೂ ಸೈಟ್ ನಮ್ಮದಲ್ಲ. ತನಿಖೆ ಮಾಡಿ ನಮ್ಮದು ಎಂದರೆ ನಿವೇಶನ ನಮಗೆ ಕೊಡುತ್ತಾರೆ. ಇಲ್ಲದಿದ್ದರೆ ಕುಟುಂಬದವರು ನ್ಯಾಯಾಲಯದ ಮೊರೆ ಹೋಗುತ್ತೇವೆ. ನಮ್ಮ ತಂದೆ ಭ್ರಷ್ಟಾಚಾರ ಮಾಡಿದ್ದಾರೆಂದು ಬಿಂಬಿಸುವುದು ಸರಿಯಲ್ಲ ಎಂದು ಯತೀಂದ್ರ ಹೇಳಿದ್ದಾರೆ.


Spread the love

LEAVE A REPLY

Please enter your comment!
Please enter your name here