HomeSports News“ಈ ಸಲವೂ ಕಪ್ ನಮ್ದೇ! RCBಗೆ ಸತತ 2ನೇ ಐಪಿಎಲ್ ಕಿರೀಟ

“ಈ ಸಲವೂ ಕಪ್ ನಮ್ದೇ! RCBಗೆ ಸತತ 2ನೇ ಐಪಿಎಲ್ ಕಿರೀಟ

For Dai;y Updates Join Our whatsapp Group

Spread the love

ಬೌಲರ್‌ಗಳ ಶಿಸ್ತುಬದ್ಧ ಮಾರಕ ದಾಳಿ ಹಾಗೂ ರನ್‌ ಮಷಿನ್ ವಿರಾಟ್ ಕೊಹ್ಲಿಯ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇತಿಹಾಸ ನಿರ್ಮಿಸಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ತಂಡವನ್ನು ಧೂಳೀಪಟ ಮಾಡಿದ RCB ಸತತ ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ಮತ್ತು ಮುಂಬೈ ಇಂಡಿಯನ್ಸ್ (MI) ನಂತರ ಸತತ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಗೌರವಕ್ಕೂ RCB ಪಾತ್ರವಾಗಿದೆ. ಈ ಐತಿಹಾಸಿಕ ಗೆಲುವಿನ ನಂತರ ವಿಶ್ವದಾದ್ಯಂತ ಕೋಟ್ಯಂತರ ಅಭಿಮಾನಿಗಳಲ್ಲಿ ಸಂಭ್ರಮದ ಹೊಳೆ ಹರಿದಿದ್ದು, “ಈ ಸಲವೂ ಕಪ್ ನಮ್ದೇ” ಎಂಬ ಘೋಷಣೆ ಎಲ್ಲೆಡೆ ಮೊಳಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್, RCB ಬೌಲರ್‌ಗಳ  ದಾಳಿಗೆ ನಲುಗಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್‌ಗಳ ಸಾಧಾರಣ ಮೊತ್ತಕ್ಕೆ ಸೀಮಿತವಾಯಿತು.

ಗುರಿ ಬೆನ್ನಟ್ಟಿದ RCB 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿ ಜಯ ಸಾಧಿಸಿತು.

ಕೊಹ್ಲಿಯ ಮಾಸ್ಟರ್ ಕ್ಲಾಸ್ ಇನ್ನಿಂಗ್ಸ್:

ಈ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮತ್ತೊಮ್ಮೆ ಕೇಂದ್ರಬಿಂದು. ಆರಂಭಿಕ ಆಟಗಾರನಾಗಿ ಕ್ರೀಸ್‌ಗೆ ಇಳಿದ ಕೊಹ್ಲಿ ಮೊದಲ ಓವರ್‌ನಿಂದಲೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. 42 ಎಸೆತಗಳಲ್ಲಿ ಅಜೇಯ 75 ರನ್ (9 ಬೌಂಡರಿ, 3 ಸಿಕ್ಸರ್) ಸಿಡಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವೆಂಕಟೇಶ್ ಅಯ್ಯರ್ ಕೂಡ ಭರ್ಜರಿ ಆರಂಭ ನೀಡಿದರು. ಅಯ್ಯರ್ ಮತ್ತು ಕೊಹ್ಲಿ ಮೊದಲ ವಿಕೆಟ್‌ಗೆ 27 ಎಸೆತಗಳಲ್ಲಿ 62 ರನ್ ಜೊತೆಯಾಟವಾಡಿದರು. ಅಯ್ಯರ್ 16 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು. ದೇವದತ್ ಪಡಿಕ್ಕಲ್ ಕೇವಲ 1 ರನ್‌ಗೆ ನಿರಾಸೆ ಮೂಡಿಸಿದರು.

ರಶೀದ್ ಖಾನ್ ಒಂದೇ ಓವರ್‌ನಲ್ಲಿ ರಜತ್ ಪಟೀದಾರ್ ಮತ್ತು ಕೃನಾಲ್ ಪಾಂಡ್ಯ ಅವರನ್ನು ಔಟ್ ಮಾಡಿ ಪಂದ್ಯಕ್ಕೆ ತಿರುವು ನೀಡಲು ಯತ್ನಿಸಿದರೂ, ಕೊಹ್ಲಿ ಸ್ಥಿರತೆಯಿಂದ ಆಟವನ್ನು ಹಿಡಿದಿಟ್ಟರು. ಟಿಮ್ ಡೇವಿಡ್ ಜೊತೆಗೂಡಿ 41 ರನ್‌ಗಳ ಮಹತ್ವದ ಜೊತೆಯಾಟವಾಡಿ ತಂಡವನ್ನು ಗೆಲುವಿನ ಹಾದಿಗೆ ಕರೆದೊಯ್ದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!