ಈ ಬಾರಿ ಲೇಖಕಿ ಬಾನು ಮುಷ್ತಾಕ್ ದಸರಾ ಉದ್ಘಾಟಿಸಲಿದ್ದಾರೆ: CM ಸಿದ್ದರಾಮಯ್ಯ ಘೋಷಣೆ

0
Spread the love

ಬೆಂಗಳೂರು: ಈ ಬಾರಿ ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಈಗಾಗಲೇ ಸಕಲ ಸಿದ್ಧತೆಗಳು ಭರದಿಂದ ಸಾಗಿವೆ.  ಈ ಬಾರಿ ಮೈಸೂರು ದಸರಾವನ್ನು ಯಾರು ಉದ್ಘಾಟನೆ ಮಾಡುತ್ತಾರೆ? ಎಂಬ ಕುತೂಹಲಕ್ಕೆ ತೆರೆಬಿದ್ದಿದೆ. ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ  ಘೋಷಣೆ ಮಾಡಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ದಸರಾ ಮಹೋತ್ಸವ ಉದ್ಘಾಟನೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರು ಉದ್ಘಾಟಿಸಲಿದ್ದಾರೆ. ಅವರ ಹೃದಯ ದೀಪ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು, ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷ ಆಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್. ರೈತ ಮತ್ತು ಕನ್ನಡ ಚಳವಳಿಯಲ್ಲಿ ಕೆಲಸ ಮಾಡಿದ್ದಾರೆ.

ಹೀಗಾಗಿ ಮಹಿಳೆಯನ್ನ ದಸರಾ ಮಹೋತ್ಸವ ಉದ್ಘಾಟನೆಗೆ ಆಹ್ವಾನ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಮೊದಲು ಈ ಭಾರಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರನ್ನು ಈ ಬಾರಿಯ ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಲಾಗಿತ್ತು ಎನ್ನುವ ಸುದ್ದಿ ಹರಿದಾಡಿದ್ದವು. ಆದ್ರೆ, ಇದಕ್ಕೆ ಸಿಎಂ ಕಚೇರಿ ಪ್ರತಿಕ್ರಿಯಿಸಿ ಅದು ಸುಳ್ಳು. ಆ ರೀತಿಯ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ  ಎಂದು  ಸ್ಪಷ್ಟನೆ ನೀಡಿದೆ. ಇದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದದರಾಮಯ್ಯನವರು ಮೈಸೂರು ದಸರಾ ಉದ್ಘಾಟನೆಗೆ  ಲೇಖಕಿ ಬಾನು ಮುಷ್ತಾಕ್ ಅವರನ್ನ ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here