ಕಂಡ ಕಂಡವರ ಆಸ್ತಿ ಕಬಳಿಸುತ್ತಿರುವವರು ನನ್ನ ಬಗ್ಗೆ ಮಾತಾಡ್ತಾರೆ: ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗರಂ!

0
Spread the love

ರಾಮನಗರ:- ಕಂಡ ಕಂಡವರ ಆಸ್ತಿ ಕಬಳಿಸುತ್ತಿರುವವರು ನನ್ನ ಬಗ್ಗೆ ಮಾತಾಡ್ತಾರೆ ಎಂದು ಡಿಕೆಶಿ ವಿರುದ್ಧ ಕುಮಾರಸ್ವಾಮಿ ಗರಂ ಆಗಿದ್ದಾರೆ.

Advertisement

ಈ ಸಂಬಂಧ ಮಾತನಾಡಿದ ಅವರು,ಕಂಡ ಕಂಡವರ ಆಸ್ತಿಗಳನ್ನು ಸರಣಿಯಾಗಿ ಕಬ್ಜಾ ಮಾಡುತ್ತಿರುವ ವ್ಯಕ್ತಿಯೊಬ್ಬ ನನ್ನ ಆಸ್ತಿ, ನನ್ನ ತಂದೆಯವರ ಆಸ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ, ಅವರು ಮಾಡುತ್ತಿರುವ ಅನಾಚಾರ, ಅಕ್ರಮಗಳ ಬಗ್ಗೆ ನೊಣವಿನಕೆರೆ ಅಜ್ಜಯ್ಯನ ಮುಂದೆ ಬಂದು ಪ್ರಮಾಣ ಮಾಡಲಿ ಎಂದರು.

ಸದಾಶಿವನಗರದಲ್ಲಿ ಐವರು ವಿಧವಾ ತಾಯಂದಿರ ಬಳಿ ನಿವೇಶನಗಳ ಸೇಲ್ ಅಗ್ರಿಮೆಂಟ್ ಮಾಡಿಕೊಳ್ಳುತ್ತಾರೆ. ಆ ನಿವೇಶನಕ್ಕೆ ಸಂಪೂರ್ಣವಾಗಿ ಹಣ ಕೊಟ್ಟಿಲ್ಲ. ಕಾಂಗ್ರೆಸ್ ನಾಯಕ ಅಲ್ಲಂ ವೀರಭದ್ರಪ್ಪ ಅವರು ಒಂದು ನಿವೇಶನ ಖರೀದಿ ಮಾಡುವುದಾಗಿ ಅಡ್ವಾನ್ಸ್ ಕೊಡುತ್ತಾರೆ. ಆದರೆ, ಅವರು ಪೂರ್ಣ ಮೊತ್ತ ಕೊಡುವುದಿಲ್ಲ. ಆಮೇಲೆ ಈ ವ್ಯಕ್ತಿ ಮಧ್ಯಪ್ರವೇಶ ಮಾಡುತ್ತಾರೆ. ಈ ವ್ಯಕ್ತಿ ಮಂತ್ರಿಯಾದ ಮೇಲೆ ರಾತ್ರೋರಾತ್ರಿ ಅವರನ್ನು ಕರೆಸಿ ಹೆದರಿಸಿ, ಬೆದರಿಸಿ ಸೇಲ್ ಅಗ್ರಿಮೆಂಟಿಗೆ ರುಜು ಹಾಕಿಸಿಕೊಂಡಿದ್ದಾರೆ. ಇಂಥ ವ್ಯಕ್ತಿ ದೇವೇಗೌಡರ ಬಗ್ಗೆ ಮಾತನಾಡುತ್ತಾರೆ. ಅವರ ಹಾಗೆ ನಾವು ಮಾಡಿಲ್ಲ ಎಂದು ಕೇಂದ್ರ ಸಚಿವರು ಗುಡುಗಿದರು.

ಗನ್ ಇಟ್ಟು ವಿಧವಾ ತಾಯಂದಿರ ನಿವೇಶನಗಳನ್ನು ರಿಜಿಸ್ಟರ್ ಮಾಡಿಸಿಕೊಂಡವರು ನೀವು, ಅನ್ಯಾಯವಾಗಿ ಕಂಡೋರ ಆಸ್ತಿಯನ್ನು ಕಬ್ಜ ಮಾಡಿದವರು ನೀವು.. ಇಂಥ ಕೆಟ್ಟ ಹಿನ್ನೆಯ ನೀವು ನನ್ನ ಬಗ್ಗೆ ಮಾತನಾಡುತ್ತಿದ್ದೀರಿ. ಬನ್ನಿ ಪ್ರಮಾಣ ಮಾಡೋಣ. ಅಜ್ಜಯನ ಮುಂದೆ ಆಗಲಿ, ನಾಡಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಅಮ್ಮನ ಮುಂದೆ ಆಗಲಿ ಪ್ರಮಾಣ ಮಾಡೋಣ. ನೀವೇ ವಿಧಾನಸೌಧಕ್ಕೆ ಬನ್ನಿ ಎಂದು ಕರೆದಿದ್ದಿರಲ್ಲ.. ಅಲ್ಲಿಗೂ ಬರಲು ನಾನು ತಯಾರಿದ್ದೇನೆ. ಬನ್ನಿ ಚರ್ಚೆ ಮಾಡೋಣ ಎಂದು ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಗೆ ಸವಾಲು ಹಾಕಿದರು.

ಈಗ ಚನ್ನಪಟ್ಟಣಕ್ಕೆ ಬಂದು ಏನೋ ಉದ್ದಾರ ಮಾಡುತ್ತೇವೆ ಎಂದು ಅಣ್ಣ ತಮ್ಮ ಬಂದಿದ್ದಾರೆ. ನೂರಾರು ವರ್ಷ ಬಾಳಿ ಬದುಕಿರುವ ಮನೆಗಳಿಗೆ ಈಗ ಬಂದು ಹಕ್ಕುಪತ್ರ ಕೊಡುತ್ತಾರಂತೆ. ಹಾಗಾದರೆ, ರಾಜ್ಯದಲ್ಲಿ ನಿಮ್ಮ ಸರಕಾರ ಬಂದು ಒಂದೂವರೆ ವರ್ಷ ಆಯಿತಲ್ಲವೇ..ಇಷ್ಟು ದಿನ ಏನು ಮಾಡ್ತಿದ್ರಪ್ಪ? ಎಂದು ಸಚಿವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಚನ್ನಪಟ್ಟಣವನ್ನು ಉದ್ಧಾರ ಮಾಡಿರೋದು ಇಲ್ಲಿನ ಜನರಿಗೆ ಬಹಳ ಚೆನ್ನಾಗಿ ಗೊತ್ತಿದೆ. ಇಲ್ಲಿನ ಮತ್ತಿಕೆರೆ ಬಳಿ ಕಲ್ಲು ಗೋಡೋನ್ ಇದೆ. ಅಲ್ಲಿ ಹೋಗಿ ನೋಡಿ, ಎಷ್ಟು ಕಲ್ಲುಗಳನ್ನು ತಂದು ಇಲ್ಲಿ ಗುಡ್ಡೆ ಹಾಕ್ತಿದ್ದೀರಿ? ಎಲ್ಲೆಲ್ಲಿಗೆ ಕಳಿಸುತ್ತಿದ್ದೀರಿ? ನನಗೆ ಗೊತ್ತಿಲ್ಲದ ವಿಷಯವೇ? ಎಂದ ಕೇಂದ್ರ ಸಚಿವರು ಬಹಿರಂಗ ಸಭೆಯಲ್ಲಿ ಆ ಕಲ್ಲು ಗೋದಾಮುಗಳ ಪೋಟೊಗಳನ್ನು ತೋರಿಸಿ, ಇದಕ್ಕೆ ಉತ್ತರ ಕೊಡಪ್ಪಾ..? ಎಂದು ಪ್ರಶ್ನಿಸಿದರು.


Spread the love

LEAVE A REPLY

Please enter your comment!
Please enter your name here