ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ: ಶ್ರೀ ಸುಗಣೇಂದ್ರ ತೀರ್ಥ ಸ್ವಾಮಿಜಿ

0
Spread the love

ಉಡುಪಿ: ಕೃಷ್ಣ ಜನ್ಮಾಷ್ಟಮಿ ಸಮಾರೋಪದಲ್ಲಿ ಪುತ್ತಿಗೆ ಶ್ರೀಗಳ ಸಂಸ್ಕೃತದ ಬಗ್ಗೆ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಂಸ್ಕೃತ ದೇವಭಾಷೆ, ಸ್ವರ್ಗಕ್ಕೆ ಹೋಗಲು ಸಂಸ್ಕೃತ ಕಲಿಯಬೇಕು ಎಂದಿರುವುದು ಚರ್ಚೆಗೆ ಗ್ರಾಸವಾಗಿದೆ. ಸಂಸ್ಕೃತ ಪವಿತ್ರ ಶ್ರೇಷ್ಠ ವಿಶ್ವಭಾಷೆಯಾಗಿದೆ. ದೇವರ ಎಲ್ಲಾ ಶ್ಲೋಕಗಳು, ಪೂಜೆಗಳು ಸಂಸ್ಕೃತ ಭಾಷೆಯಲ್ಲಿ ನಡೆಯುತ್ತದೆ.

Advertisement

ಒಂದು ತಿಂಗಳುಗಳ ಕಾಲ ನಡೆದ ಶ್ರೀ ಕೃಷ್ಣ ಮಹಾಸ್ವೋತ್ಸವವನ್ನು ದೇವರಿಗೆ ಅರ್ಪಣೆ ಮಾಡಿದ್ದೇವೆ. ಶ್ರೀಕೃಷ್ಣನ ಮಹೋತ್ಸವದ ಸಂದರ್ಭವಾದ ಕಾರಣ ನಾನು ದೇವ ಭಾಷೆ ಸಂಸ್ಕೃತದಲ್ಲಿ ಮಾತನಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಭಾಷೆಗಳ ತಾಯಿ ಸಂಸ್ಕೃತ. ತುಳು, ಕನ್ನಡ, ಮಲಯಾಳಂ, ಹಿಂದಿ, ತಮಿಳು ಹಾಗೂ ತೆಲುಗು ಭಾಷೆಗಳು ಹುಟ್ಟಿಕೊಂಡಿರುವುದೇ ಸಂಸ್ಕೃತದಿಂದ. ಕೇವಲ ಭಾರತೀಯ ಭಾಷೆಗಳಿಗೆ ಮಾತ್ರ ಸಂಸ್ಕೃತ ಮೂಲವಲ್ಲ. ಆಂಗ್ಲ ಭಾಷೆಗಳಿಗೂ ಮೂಲ ಸಂಸ್ಕೃತವೇ ಆಗಿದೆ. ಪಿತಾದಿಂದ ಫಾದರ್, ಮಾತಾದಿಂದ ಮದರ್ ಹುಟ್ಟಿಕೊಂಡಿದೆ. ಸಮಗ್ರವು ಸಂಸ್ಕೃತ ಭಾಷೆಯಿಂದ ಹುಟ್ಟಿಕೊಂಡಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

 


Spread the love

LEAVE A REPLY

Please enter your comment!
Please enter your name here