ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಅಂತ್ಯವಾಗಬೇಕು: ಕೆ.ಎಸ್ ಈಶ್ವರಪ್ಪ

0
Spread the love

ವಿಜಯಪುರ: ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಅಂತ್ಯವಾಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು. ವಿಜಯಪುರದಲ್ಲಿ ತಿರುಪತಿ ಲಡ್ಡುವಿನಲ್ಲಿ ಪ್ರಾಣಿಕೊಬ್ಬು ಬಳಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಶ್ರದ್ಧೆ ಹಾಗೂ ಶ್ರದ್ಧಾಕೇಂದ್ರಕ್ಕೆ ಅಪಮಾನ ಮಾಡುವವರಿಗೆ ಇದು ಅಂತ್ಯವಾಗಬೇಕು. ಇದರಲ್ಲಿ ವಿದೇಶಿ ಸಂಚಿದೆ,

Advertisement

ಈ ಪ್ರಕರಣ ಸಿಬಿಐಗೆ ತನಿಖೆಗೆ ಕೊಡಬೇಕು. ದೇವರ ದಯೆಯಿಂದ ಇಡೀ ದೇಶದ ಎಲ್ಲ ಪಕ್ಷದ ನಾಯಕರು ಇದನ್ನು ಖಂಡಿಸಿದ್ದಾರೆ. ಇದು ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದು ಹೇಳಿದ್ದಾರೆ. ತಿರುಪತಿ ತಿಮ್ಮಪ್ಪನ ಬಗ್ಗೆ ಇರುವ ಶ್ರದ್ಧೆಯಿಂದ ಎಲ್ಲರೂ ಇದನ್ನು ಖಂಡಿಸಿದ್ದಾರೆ ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here