ಶಿವಮೊಗ್ಗ:- ಅಕ್ರಮವಾಗಿ ಚಿರತೆಯ ಹಲ್ಲು, ಉಗುರು ಸಾಗಾಟಕ್ಕೆ ಯತ್ನಿಸಿದ ಆರೋಪಿಯನ್ನು ಅರೆಸ್ಟ್ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದೆ.
Advertisement
ಸಾಗರದ ಅರಣ್ಯ ಸಂಚಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಲೋಕೇಶ್ ಬಂಧಿತ ಆರೋಪಿ ಎನ್ನಲಾಗಿದೆ. ಆತನ ಬಳಿ ಚಿರತೆಯ ಉಗುರು ಮತ್ತು ಹಲ್ಲುಗಳು ಪತ್ತೆಯಾಗಿವೆ. ಮಾಲು ಸಮೇತ ಆತನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯಿಂದ 16 ಚಿರತೆ ಉಗುರು ಮತ್ತು 3 ಚಿರತೆ ಹಲ್ಲುಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.