ಚಿಕ್ಕಬಳ್ಳಾಪುರ:- ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಜೀವ್ ಗೌಡ ವಿರುದ್ಧ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಮೃತ ಗೌಡ ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷ ಶ್ರೀನಿವಾಸ ಗೌಡ ಅವರ ದೂರಿನ ಮೇರೆಗೆ ಬಿಎನ್ಎಸ್ ಸೆಕ್ಷನ್ಗಳು 132, 351(3), 56, 224, 352 ಮತ್ತು 353(2) ಅಡಿಯಲ್ಲಿ ಕೇಸ್ ದಾಖಲಾಗಿದ್ದು, ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಎರಡು ಮೊಬೈಲ್ ಫೋನ್ಗಳನ್ನು ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದಾರೆ.
ಅವರ ಬಂಧನಕ್ಕಾಗಿ ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಅವರ ನಿರ್ದೇಶನದಂತೆ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಎನ್ ಪೊಲೀಸ್ಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.



