ಕೋಲಾರ:- ಎಂಡಿಎಂ ಮಾದಕ ಪದಾರ್ಥ ಮಾರಾಟ ಮಾಡುತ್ತಿದ್ದ ಮೂವರನ್ನು CEN ಪೊಲೀಸರು ಅರೆಸ್ಟ್ ಮಾಡಿರುವ ಘಟನೆ ಕೋಲಾರದಲ್ಲಿ ಜರುಗಿದೆ.
Advertisement
ಬಂಧಿತ ಆರೋಪಿಗಳನ್ನು ಸಮೀರ್ ಪಾಷಾ, ತಮೀಮ್ ಖಾನ್, ಷಹೀದ್ ಪಾಷಾ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 20,000 ಮೌಲ್ಯದ 5.4 ಗ್ರಾಂ ತೂಕದ ಎಂಡಿಎಂ ಮಾದಕ ಪದಾರ್ಥ ವಶಪಡಿಸಿಕೊಳ್ಳಲಾಗಿದೆ.
ಅಷ್ಟೇ ಅಲ್ಲದೇ ಒಂದು ಮಾರುತಿ ಸ್ವಿಫ್ಟ್ ಕಾರು, 4 ಮೊಬೈಲ್ ಹಾಗೂ 1 ಡ್ರ್ಯಾಗರ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೋಲಾರ ನಗರದ ಸುಲ್ತಾನ್ ತಿಪ್ಪಸಂದ್ರ ಬಳಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.