ವಿಜಯಪುರ:- ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ಜರುಗಿದೆ.
28 ವರ್ಷದ ಗೀತಾ ಬಡಗಿ, 6 ವರ್ಷದ ಶ್ರವಣ್, 4 ವರ್ಷದ ಶರಣ್, ನೀರುಪಾಲಾದವರು. ಮೃತ ಗೀತಾ ತಂದೆ ರಾಮಪ್ಪ ನಾಯ್ಕೋಡಿಗೆ ಸೇರಿದ ಜಮೀನಿನಲ್ಲಿ ಘಟನೆ ನಡೆದಿದೆ.
ಶ್ರೀಶೈಲ ಜೊತೆಗೆ ಮದುವೆಯಾಗಿದ್ದ ಗೀತಾ, ಗಂಡನ ಜೊತೆ ಜಗಳವಾಡಿ ತವರು ಮನೆಗೆ ಬಂದಿದ್ದರು. ಈ ವೇಳೆ ಮಕ್ಕಳ ಜತೆ ಕೃಷಿ ಹೊಂಡದ ಬಳಿ ಹೋಗಿದ್ದಾಗ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ. ಸದ್ಯ ತಾಯಿ ಮತ್ತು ಗಂಡು ಮಕ್ಕಳಿಬ್ಬರ ಶವಗಳನ್ನು ಸ್ಥಳೀಯರು ಹೊರ ತೆಗೆದಿದ್ದಾರೆ.
ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



