ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಶ್ರೀನಿವಾಸ ಸಾಗರ ಕೆರೆಯಲ್ಲಿ ನಡೆದಿದೆ. ರಂಜಾನ್ ಬಳಿಕ ಕುಟುಂಬ ಸಮೇತ ಪ್ರವಾಸಕ್ಕೆಂದು ಬಂದಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
Advertisement
  
ಇಬ್ಬರು ಮಹಿಳೆಯರು ಹಾಗೂ ಒರ್ವ ಪುರುಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೃತದೇಹಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


