ಬೆಂಗಳೂರು:- ಶೀಲ ಶಂಕಿಸಿ ಪತ್ನಿ ಹಾಗೂ ಪ್ರಿಯಕರನನ್ನು ಬರ್ಬರ ಹತ್ಯೆಗೈದ ಗಂಡನೋರ್ವ ಬಳಿಕ ತಾನು ಸೂಸೈಡ್ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜರುಗಿದೆ.
ನಗರದ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯಲ್ಲಿ ಘಟನೆ ಜರುಗಿದ್ದು, ಈ ಮೂಲಕ ಅಕ್ರಮ ಸಂಬಂಧಕ್ಕೆ ಮೂವರ ಹೆಣ ಬಿದ್ದಂತಾಗಿದೆ.
ನಿರ್ಮಾಣ ಹಂತದ ಕಟ್ಟಡದಲ್ಲಿ ಈ ಹತ್ಯೆ ನಡೆದಿದ್ದು, ಮೊದಲಿಗೆ ಮರದ ತುಂಡಿನಿಂದ ಮಾರಣಾಂತಿಕ ಹಲ್ಲೆ ನಡೆಸಿ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಗಂಡ ಕೊಲೆ ಮಾಡಿದ್ದಾನೆ. ಬಳಿಕ ತಾನೂ ಸೂಸೈಡ್ ಮಾಡಿಕೊಂಡು ಪ್ರಾಣ ಬಿಟ್ಟಿದ್ದಾನೆ.
ಕೂಡಲೇ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.



