ತುಮಕೂರು: ಆಂಧ್ರದ ಕಡೆ ಪ್ರವಾಸಕ್ಕೆ ತೆರಳಿದ್ದ ತುಮಕೂರಿನ ಮೂವರು ದುರ್ಮರಣ ಹೊಂದಿರುವ ಘಟನೆ ಆಂಧ್ರದ ಕರ್ನೂಲ್ ಬಳಿ ನಡೆದಿದೆ. ನವೀನ್(48), ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. ಇವರು ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ನಿವಾಸಿಗಳು ಎನ್ನಲಾಗಿದೆ.
ನವೀನ್, ಸಂತೋಷ್, ಲೋಕೇಶ್ ಸೇರಿ ಒಟ್ಟು 6 ಮಂದಿ ಆಂಧ್ರಪ್ರದೇಶದ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಕಾರು ಕರ್ನೂಲ್ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿದೆ.
ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ನವೀನ್, ಸಂತೋಷ್ ಹಾಗೂ ಲೋಕೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



