ಬೆಂಗಳೂರು: ಅನಧಿಕೃತವಾಗಿ ಬೆಂಗಳೂರಿನಲ್ಲಿ ವಾಸವಿದ್ದ ವಿದೇಶಿ ಪ್ರಜೆಗಳ ವಿರುದ್ಧ ಕ್ರಮ ಜರುಗಿಸಿದ್ದು, ಮೂವರು ಶ್ರೀಲಂಕಾದ ಪ್ರಜೆಗಳನ್ನು ಅರೆಸ್ಟ್ ಮಾಡಿದ್ದಾರೆ. . ದೇವನಹಳ್ಳಿ ಠಾಣೆ ವ್ಯಾಪ್ತಿಯ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದ ಮೂವರ ವಿರುದ್ಧ ಫಾರಿನ್ ಆ್ಯಕ್ಟ್ ಅಡಿ ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಶ್ರೀಲಂಕಾದ ಜಾಫ್ನಾದಿಂದ ಬೋಟ್ ಮೂಲಕ ತಮಿಳುನಾಡಿಗೆ ಬಂದಿಳಿದ ವಿದೇಶೀಯರು, ಅಲ್ಲಿಂದ ರಾಮೇಶ್ವರಂಗೆ ಹೋಗಿದ್ದರು. ಮೂವರು ಶ್ರೀಲಂಕಾದ ಪ್ರಜೆಗಳೂ ಸ್ಥಳೀಯ ವ್ಯಕ್ತಿಯೊಬ್ಬನ ಸಹಾಯ ಪಡೆದು ಬೆಂಗಳೂರಿಗೆ ಬಂದು, ಅಕ್ರಮವಾಗಿ ದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ವಾಸವಿದ್ದರು.
ಕಳೆದ ಒಂದು ವರ್ಷದಿಂದ ಪಾಸ್ಪೋರ್ಟ್ ಮತ್ತು ವೀಸಾವಿಲ್ಲದೆಯೇ ಇಲ್ಲಿ ಉಳಿದಿದ್ದರು. ವಿದೇಶಿ ಪ್ರಜೆಗಳು ನೆಲೆಸಿದ್ದ ಬಗ್ಗೆ ಸಿಸಿಬಿಗೆ ಮಾಹಿತಿ ಲಭ್ಯವಾಗಿತ್ತು. ಬೆಂಗಳೂರಿನ ಸಿಸಿಬಿ ಠಾಣೆಯಲ್ಲಿ ಫಾರಿನ್ ಆ್ಯಕ್ಟ್ ಅಡಿ ಕೇಸ್ ದಾಖಲು ಮಾಡಿಕೊಂಡಿದ್ದಾರೆ.
ಮೂವರೂ ಅಂತಾರಾಷ್ಟ್ರೀಯ ಮಟ್ಟದ ಡ್ರಗ್ ಡೀಲರ್ಸ್ ಎಂಬ ಮಾಹಿತಿ ಲಭ್ಯವಾಗಿದ್ದು, ಓರ್ವ ಆರೋಪಿ ವಿರುದ್ಧ ಎನ್ಸಿಬಿ ಕೇಸ್ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಸಧ್ಯಕ್ಕೆ ಶ್ರೀಲಂಕಾದ ರಾಯಭಾರಿ ಕಚೇರಿಗೆ ಸಿಸಿಬಿ ಈ ಬಗ್ಗೆ ಮಾಹಿತಿ ಕಳುಹಿಸಿದೆ. ಈಗ ಶ್ರೀಲಂಕಾ ಅಕ್ರಮ ವಲಸಿಗರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.