ಮಂಗಳೂರು:-ರೆಸಾರ್ಟ್ನ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ದುರ್ಮರಣ ಹೊಂದಿದ ಘಟನೆ ಜರುಗಿದೆ.
Advertisement
ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ಖಾಸಗಿ ಬೀಚ್ ರೆಸಾರ್ಟ್ನಲ್ಲಿ ಘಟನೆ ನಡೆದಿದ್ದು, ನಿಶಿತ ಎಂ.ಡಿ, ಪಾರ್ವತಿ ಎಸ್, ಕೀರ್ತನ ಎನ್ ಮೃತ ದುರ್ವೈವಿಗಳು ಎಂದು ಗುರುತಿಸಲಾಗಿದೆ.
ಯುವತಿಯರು ನಿನ್ನೆ ಬೆಳಗ್ಗೆ ಬೀಚ್ ರೆಸಾರ್ಟ್ ಗೆ ಆಗಮಿಸಿ ಕೊಠಡಿ ಪಡೆದಿದ್ದು, ಇಂದು ಬೆಳಿಗ್ಗೆ 8.30ರ ಸುಮಾರಿಗೆ ಸ್ವಿಮ್ಮಿಂಗ್ ಫೂಲ್ನಲ್ಲಿ ಆಟವಾಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.
ಸ್ವಿಮ್ಮಿಂಗ್ ಫೂಲ್ ನಲ್ಲಿ ಒಂದು ಬದಿ ಆರು ಅಡಿಯಷ್ಟು ಆಳವಿತದ್ದು, ಈ ವೇಳೆ ಆಯಾತಪ್ಪಿ ಓರ್ವ ಯುವತಿ ಮುಳುಗಿರುವ ಸಾಧ್ಯತೆ ಇದ್ದು, ಆಕೆಯ ರಕ್ಷಣೆಗೆ ತೆರಳಿದ ಉಳಿದ ಇಬ್ಬರೂ ಮುಳುಗಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಉಳ್ಳಾಲ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.