ಚಾಮರಾಜನಗರ:– ಗುಂಡ್ಲುಪೇಟೆ ತಾಲೂಕಿನ ದೇಶಿಪುರ ಕಾಲೊನಿಯಲ್ಲಿ ಹುಲಿ ದಾಳಿಗೆ ಮಹಿಳೆ ಬಲಿಯಾಗಿರುವ ಘಟನೆ ಜರುಗಿದೆ. ಪುಟ್ಟಮ್ಮ ಮೃತ ಮಹಿಳೆ.
Advertisement
ದೇಶಿಪುರ ಕಾಲೊನಿಯ ಸಮೀಪ ಕುರಿಗಳನ್ನು ಮೇಯಿಸುವಾಗ ಹುಲಿಯೊಂದು ಏಕಾಏಕಿ ಮೇಲೆರಗಿದ್ದು ಕುತ್ತಿಗೆ, ಎದೆಭಾಗ, ಹೊಟ್ಟೆ ಭಾಗದಲ್ಲಿ ಬಲವಾಗಿ ದಾಳಿ ನಡೆಸಿ ಕೊಂದಿದೆ. ನಂತರ, ಮಹಿಳೆಯನ್ನು ಅರಣ್ಯದೊಳಗೆ ಎಳೆದೊಯ್ದಿತ್ತು. ಗ್ರಾಮಸ್ಥರು ಹುಡುಕಾಡಿದಾಗ ಪುಟ್ಟಮ್ಮನ ಶವ ದೊರೆತಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ಈ ಹುಲಿ ದಾಳಿ ನಡೆದಿದೆ.