ಹುಲಿ ದಾಳಿ: 2 ಕಣ್ಣು ಕಳೆದುಕೊಂಡ ರೈತನಿಗೆ ಸರ್ಕಾರದಿಂದ ಸಂಪೂರ್ಣ ಪರಿಹಾರ: ಸಿಎಂ ಸಿದ್ದರಾಮಯ್ಯ ಭರವಸೆ

0
Spread the love

ಮೈಸೂರು: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಸಿಎಂ ಸೂಚನೆಗಳು…

  • ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ.
  • ಪರಿಹಾರದ ಮೊತ್ತವನ್ನು ಸಂಪೂರ್ಣವಾಗಿ ಬಿಡುಗಡೆಗೊಳಿಸಲು ಸಿಎಂ ಸೂಚನೆ‌.
  • ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು.
  • ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Spread the love

LEAVE A REPLY

Please enter your comment!
Please enter your name here