ಹುಲಿ ಉಗುರು ಧರಿಸಿದ ಪ್ರಕರಣ: 14 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿ ವರ್ತೂರು ಸಂತೋಷ್

0
Spread the love

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜೈಲು ಪಾಲಾಗಿದ್ದಾರೆ. ಹುಲಿ ಉಗುರು ಧರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಬಂಧಿಸಲಾಗಿತ್ತು. ಅರಣ್ಯ ಅಧಿಕಾರಿಗಳು ಇಂದು ನ್ಯಾಯಾಲಯಕ್ಕೆ ಸಂತೋಷ್ ಅವರನ್ನು ಹಾಜರು ಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ಕಾಲ ನ್ಯಾಯಾಧೀಶರು ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

Advertisement

ನೆನ್ನೆ ರಾತ್ರಿಯಿಂದಲೇ ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸಿದ್ದರು. ತನ್ನಲ್ಲಿರುವ ಹುಲಿ ಉಗುರು ಬಂದಿದ್ದು ಹೇಗೆ? ಯಾರು ಕೊಟ್ಟರು? ಎಲ್ಲಿಂದ ಖರೀದಿ ಮಾಡಿದಿದ್ದೀರಿ? ಮಾರಿದವರು ಈಗ ಎಲ್ಲಿದ್ದಾರೆ? ಎಷ್ಟು ಮಂದಿಗೆ ಈ ರೀತಿ ಉಗುರು ಮಾರಲಾಗಿದೆ ಹೀಗೆ ಇತ್ಯಾದಿ ಪ್ರಶ್ನೆಗಳನ್ನು ಅರಣ್ಯಾಧಿಕಾರಿಗಳು ಸಂತೋಷ್ ಮುಂದೆ ಇಟ್ಟಿದ್ದರು. ಅದಕ್ಕೆ ಸಂತೋಷ್ ಕೂಡ ಉತ್ತರ ನೀಡಿದ್ದಾರೆ ಎನ್ನುವ ಮಾಹಿತಿ ಇದೆ.

ಅಪರಿಚಿತರು ಹುಲಿ ಉಗುರನ್ನು ಮಾರಕ್ಕೆ ತಂದಿದ್ದರು. ಅವರು ಎಲ್ಲಿಂದ ಬಂದಿದ್ದರು, ಯಾರು ಎನ್ನುವುದು ನನಗೆ ಗೊತ್ತಿಲ್ಲ. ಮಾರಾಟ ಮಾಡುತ್ತಿರುವ ವಿಷಯ ಗೆಳೆಯರಿಂದ ತಿಳಿಯಿತು. ಹಣ ಕೊಟ್ಟು ಇದನ್ನು ಖರೀದಿ ಮಾಡಿದ್ದೇನೆ ಎಂದು ಅಧಿಕಾರಿಗಳ ಮುಂದೆ ಸಂತೋಷ್ ಹೇಳಿದ್ದಾರೆ ಎನ್ನುವುದು ಸಿಕ್ಕಿರುವ ವರ್ತಮಾನ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಸಂತೋಷ್ ಅವರ ಬಂಧನವಾಗಿದ್ದು, ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಅನ್ನು ಅವರು ಹಾಕಿಕೊಂಡಿದ್ದರು. ಈ ಕುರಿತು ಶರತ್ ಎನ್ನುವವರು ದೂರು ನೀಡಿದ್ದರು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಲಾಗಿತ್ತು.


Spread the love

LEAVE A REPLY

Please enter your comment!
Please enter your name here