ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ವಲಯದಲ್ಲಿ ಉರುಳಿಗೆ ಸಿಲುಕಿ ಸಾವನ್ನಪ್ಪಿದ್ದ ಆರು ವರ್ಷದ ಗಂಡು ಹುಲಿ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಕೊಂಗರಹಳ್ಳಿ ಗ್ರಾಮದ ಕುಮಾರ್ ಎಂಬಾತನನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.
ಬೈಕ್ ಕ್ಲಚ್ ವೈರ್ ಬಳಸಿ ವನ್ಯಜೀವಿ ಬೇಟೆಗೆ ಉರುಳು ಹಾಕಲಾಗಿದ್ದು, ಅದರಲ್ಲಿ ಸಿಲುಕಿದ ಹುಲಿ ಪರದಾಡಿ ಬಳಿಕ ಗುಂಡಾಲ್ ಜಲಾಶಯದಲ್ಲಿ ಬಿದ್ದು ಸಾವನ್ನಪ್ಪಿದೆ. ಹುಲಿಯ ಶ್ವಾಸಕೋಶದಲ್ಲಿ ನೀರು ಸಂಗ್ರಹವಾಗಿರುವುದು ಪತ್ತೆಯಾಗಿದೆ.
ಇನ್ನು ಗುಂಡಾಲ್ ಜಲಾಶಯದ ಸುತ್ತಮುತ್ತ ಜಮೀನುಗಳಿವೆ. ಜಮೀನಿನಲ್ಲಿ ಬೆಳೆದ ಬೆಳೆಗಳನ್ನ ಕಾಡು ಹಂದಿಗಳು ಬಂದು ನಾಶ ಮಾಡುತ್ತಿರುತ್ತವೆ. ಹಾಗಾಗಿ ಕಾಡು ಹಂದಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಕೆಲವರು ಬೈಕ್ ಕ್ಲಚ್ ಕೇಬಲ್ನ ಮೂಲಕ ಉರಳನ್ನ ಸಿದ್ಧಪಡಿಸಿ ಬೇಲಿ ಬಳಿ ಹಾಕಿರುತ್ತಾರೆ.
ಈ ಕುರಿತು ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಿತರರ ಪಾತ್ರವಿದೆಯೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.



